LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಯುಪಿಐ ಶುಲ್ಕ ಜನರ ಜೇಬಿನ ಮೇಲೆ ‘ಸರ್ಜಿಕಲ್ ಸ್ಟ್ರೈಕ್’: ಸಚಿವ ಶಿವರಾಜ ತಂಗಡಗಿ ಟೀಕೆ

ಬೆಂಗಳೂರು, ಸೆ. 16 : ₹2 ಸಾವಿರಕ್ಕಿಂತ ಹೆಚ್ಚಿನ ನಿರ್ದಿಷ್ಟ ಯುಪಿಐ ವ್ಯಾಪಾರಿ ವಹಿವಾಟುಗಳಿಗೆ ಎಂಡಿಆರ್ ವಿಧಿಸುವ ಕೇಂದ್ರದ ನಿರ್ಧಾರವನ್ನು ಸಚಿವ ಶಿವರಾಜ ತಂಗಡಗಿ ತೀವ್ರವಾಗಿ ಟೀಕಿಸಿದ್ದು, ‘ಮೋದಿ ಟ್ಯಾಕ್ಸ್’ ಮೂಲಕ ಕೇಂದ್ರ ಸರ್ಕಾರ ಜನರ ಜೇಬಿನ ಮೇಲೆ ಮತ್ತೊಮ್ಮೆ ‘ಸರ್ಜಿಕಲ್ ಸ್ಟ್ರೈಕ್’ ನಡೆಸಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಿರುದ್ಯೋಗ, ಹಣದುಬ್ಬರ ಮತ್ತು ಆದಾಯ ಕೊರತೆಯಿಂದ ಜನರು ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೊಸ ಶುಲ್ಕಗಳನ್ನು ವಿಧಿಸುವುದು ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಹಾಕಿದಂತಾಗುತ್ತದೆ ಎಂದು ತಂಗಡಗಿ ಹೇಳಿದ್ದಾರೆ.

‘ಗ್ರಾಹಕರಿಗೆ ಯುಪಿಐ ಉಚಿತವಾಗಿರುತ್ತದೆ, ವ್ಯಾಪಾರಿಗಳಿಗೆ ಮಾತ್ರ ಎಂಡಿಆರ್ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ವ್ಯಾಪಾರಿಗಳ ಮೇಲೆ ಬೀಳುವ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆಯೇ ವರ್ಗಾವಣೆಯಾಗುವ ಸಾಧ್ಯತೆ ಇದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ತಿ ಹಂಚಿಕೆ ವಿವಾದ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ, ವಕೀಲ ಪುತ್ರಿಯ ಬರ್ಬರ ಹತ್ಯೆಯುಪಿಐ ಶುಲ್ಕ ಜನರ ಜೇಬಿನ ಮೇಲೆ ‘ಸರ್ಜಿಕಲ್ ಸ್ಟ್ರೈಕ್’: ಸಚಿವ ಶಿವರಾಜ ತಂಗಡಗಿ ಟೀಕೆ‘ವಂದೇ ಮಾತರಂ’ ಪೂರ್ಣ ಹಾಡಿದರೆ ರಾಜೀನಾಮೆ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲುರೈಲ್ವೆ ಯೋಜನೆಗೆ ಭೂಸ್ವಾಧೀನ: ಎಕರೆಗೆ ₹1 ಕೋಟಿ ಪರಿಹಾರಕ್ಕೆ ರೈತರ ಆಗ್ರಹಲಾಡ್ಜನಲ್ಲಿ ಯುವತಿ ಅನುಮಾನಾಸ್ಪದ ಸಾವು₹2 ಸಾವಿರಕ್ಕಿಂತ ಹೆಚ್ಚಿನ ಯುಪಿಐ ವ್ಯಾಪಾರಿ ಪಾವತಿಗೆ ಶೇ 0.4 ಎಂಡಿಆರ್ರಾಸಾಯನಿಕ ಮಿಶ್ರಿತ ಬಣ್ಣದ ಅಡಿಕೆ ಅಕ್ರಮ ಸಾಗಣೆ; ಕಂಟೈನರ್ ಜಪ್ತಿ, ಇಬ್ಬರು ವಶಕ್ಕೆಮಣಿಪುರದಲ್ಲಿ ಮತ್ತೆ ಹಿಂಸಾಚಾರ: ನಾಗಾ ಗ್ರಾಮದ ಮೇಲೆ ಉಗ್ರರ ದಾಳಿ, ಎರಡು ಮನೆಗಳಿಗೆ ಬೆಂಕಿಯುಪಿಐ ವಹಿವಾಟಿಗೆ ಎಂಡಿಆರ್: ‘ಅಮೆರಿಕದ ಒತ್ತಡಕ್ಕೆ ಕೇಂದ್ರ ಮಣಿದಿದೆ’ ಎಂದು ಕಾಂಗ್ರೆಸ್ ಆರೋಪವಾಯುಮಾಲಿನ್ಯದಿಂದ ಆತ್ಮಹತ್ಯೆ ಆಲೋಚನೆ, ಸಾವಿನ ಅಪಾಯ ಹೆಚ್ಚಳ: ಅಧ್ಯಯನ