LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹ

ಬೈಲಹೊಂಗಲ, ಜುಲೈ 21: 46ನೇ ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕಳಸಾ–ಬಂಡೂರಿ ನಾಲಾ ಜೋಡಣೆ ಯೋಜನೆಯನ್ನು ಶೀಘ್ರ ಜಾರಿಗೊಳಿಸುವಂತೆ ರೈತರು ಸರ್ಕಾರವನ್ನು ಆಗ್ರಹಿಸಿದರು.

ಕರುನಾಡ ರಕ್ಷಣಾ ವೇದಿಕೆ ಹಾಗೂ ವಿವಿಧ ರೈತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ, ರೈತರ ಸನ್ಮಾನ ಹಾಗೂ ಸಸಿ ವಿತರಣೆ ನಡೆಯಿತು.

ನೇಗಿಲ ಯೋಗಿ ರೈತ ಪ್ರಶಾಂ ಸೇವಾ ಸಂಘದ ರಾಜ್ಯಾಧ್ಯಕ್ಷ ಶಂಕರ ಬೋಳಣ್ಣವರ ಮಾತನಾಡಿ, ಉತ್ತರ ಕರ್ನಾಟಕದ ನೀರಾವರಿ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲಸಾ–ಬಂಡೂರಿ ಯೋಜನೆಯಿಂದ ಮಾತ್ರ ಸಾಧ್ಯವಾಗಲಿದೆ. ಸರ್ಕಾರ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರೈತರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಮಾತನಾಡಿ, ರೈತರು ದೇಶದ ಬೆನ್ನೆಲುಬಾಗಿದ್ದು, ಅವರ ಕಲ್ಯಾಣಕ್ಕೆ ಸರ್ಕಾರ ಮೊದಲ ಆದ್ಯತೆ ನೀಡಬೇಕು ಎಂದರು. ಬೈಲಹೊಂಗಲ ತಾಲ್ಲೂಕಿಗೆ ಸಮಗ್ರ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಅವರು ಒತ್ತಾಯಿಸಿದರು.

ಸುಮಾರು ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮುರಗೋಡ–ಚಚಡಿ ಎತ್ತಿನಹೊಳೆ ನೀರಾವರಿ ಯೋಜನೆಯನ್ನೂ ಶೀಘ್ರ ಪೂರ್ಣಗೊಳಿಸಬೇಕು. ಇದರಿಂದ ಸಾವಿರಾರು ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಅವರು ಹೇಳಿದರು.

ಕರುನಾಡ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ರೈತ ಘಟಕದ ರಾಜ್ಯಾಧ್ಯಕ್ಷ ಅಪ್ಪಾಸಾಹೇಬ ಲಕ್ಕುಂಡಿ ಹಾಗೂ ಜಿಲ್ಲಾ ಸಂಯೋಜಕ ಆನಂದಗೌಡ ಪಾಟೀಲ ಮಾತನಾಡಿ, ನೀರಾವರಿ ಸೌಲಭ್ಯ ವಿಸ್ತರಣೆ, ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಂಬಲ ಮತ್ತು ರೈತಪರ ನೀತಿಗಳ ಪರಿಣಾಮಕಾರಿ ಜಾರಿಗಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗಾಡ್ ಫೌಂಡೇಶನ್ ಹಾಗೂ ಸಾಂಗ್ಲಿಯ ಕುಲ್ಲೊಳ್ಳಿ ನೇತ್ರಾಲಯದ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ 202 ಮಂದಿಗೆ ಕಣ್ಣಿನ ತಪಾಸಣೆ, 204 ಮಂದಿಗೆ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಸಲಾಗಿದ್ದು, 26 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನೂರಾರು ರೈತರು, ಮಹಿಳೆಯರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿದೆಹಲಿ ಪೊಲೀಸರ ಲಾಠಿ ಪ್ರಹಾರದಲ್ಲಿ ಗಾಯಗೊಂಡ ಯುವತಿ ವೆಂಟಿಲೇಟರ್‌ನಲ್ಲಿ; ಸ್ಥಿತಿ ಗಂಭೀರ