LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಬೆಳಗಾವಿಯಲ್ಲಿ ಮಹಾರಾಷ್ಟ್ರದಿಂದ ಸಾಗಿಸುತ್ತಿದ್ದ ₹ 2.73 ಕೋಟಿ ವಶ

ಬೆಳಗಾವಿ : ಮಾಳಮಾರುತಿ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಮಹಾರಾಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಗೆ ಗೂಡ್ಸ ವಾಹನದಲ್ಲಿ ಕ್ಯಾಬಿನ್ ನಿರ್ಮಿಸಿ ಸಾಗಿಸುತ್ತಿದ್ದ 2.73 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಗೂಡ್ಸ ವಾಹನವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.



ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿಯ ಸಚಿನ ಮೇನಕುದಳೆ ಹಾಗೂ ಮಹಾರಾಷ್ಟ್ರದ ಮಾರುತಿ ಮಾರಗುಡೆ ಎಂದು ಗುರುತಿಸಲಾಗಿದೆ.



ಬೆಳಗಾವಿ ಪೊಲೀಸ್ ಆಯುಕ್ತರು ಹಾಗೂ ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸಪೆಕ್ಟರ್ ನಂದೀಶ್ವರ ಕುಂಬಾರ ಹಾಗೂ ತಂಡವು ಸಾಂಗ್ಲಿಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಅಶೋಕ ಲೇಲ್ಯಾಂಡ್ ಗೂಡ್ಸ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಸೂಕ್ತ ದಾಖಲೆಗಳಿಲ್ಲದೇ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.



ವಾಹನದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು, 2,73,27,500 ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ಹಣ ಸಾಗಣೆ ಮಾಡಲೆಂದೇ ಗೂಡ್ಸ ವಾಹನದ ಕ್ಯಾಬಿನ್ ನಲ್ಲಿ ಮಾರ್ಪಾಡು ಮಾಡಿರುವುದು ಕಂಡುಬಂದಿದೆ.



ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ