LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಿಲ್ಲಿಸದ ಬಸ್ಸಿಗೆ ಕಲ್ಲೆಸೆದ ಮಹಿಳೆಗೆ ₹ 5,000 ದಂಡ

ಕೊಪ್ಪಳ :  ಕೊಪ್ಪಳದಿಂದ ಹೊಸಪೇಟೆಗೆ ಹೋಗುತ್ತಿದ್ದ ಬಸ್‌ಗಳು ತಾಲೂಕಿನ ಹೊಸ ಲಿಂಗಾಪುರ (ಹುಲಿಗಿ ಕ್ರಾಸ್‌) ಬಳಿ ನಿಲ್ಲಿಸದ ಕಾರಣ ಕೋಪಗೊಂಡ ಮಹಿಳೆಯೊಬ್ಬರು ಸರ್ಕಾರಿ ಬಸ್‌ ಗೆ ಕಲ್ಲು ತೂರಿ ಅದರ ಗಾಜನ್ನು ಒಡೆದಿದ್ದ ಕಾರಣಕ್ಕೆ ಅವರಿಗೆ 5,000 ರೂಪಾಯಿ ದಂಡ ವಿಧಿಸಲಾಗಿದೆ.



ರವಿವಾರ ಈ ಘಟನೆ ನಡೆದಿದ್ದು, ಬಸ್‌ ಚಾಲಕ ಕಂ ನಿರ್ವಾಹಕ ಮುಕ್ಕಣ್ಣ ಕುಕನೂರು ಅವರು ಕಲ್ಲು ಎಸೆದ ಮಹಿಳೆಯನ್ನು ಎಲ್ಲ ಪ್ರಯಾಣಿಕರೊಂದಿಗೆ ಬಸ್ಸನ್ನು ಮುನಿರಾಬಾದ್‌ ಪೊಲೀಸ್‌ ಠಾಣೆಗೆ ತೆಗೆದುಕೊಂಡು ಹೋದರು. ನಂತರ ಮಹಿಳೆಯಿಂದ ₹5 ಸಾವಿರ ದಂಡ ಕಟ್ಟಿಸಿಕೊಂಡು ವಾಪಸ್ ಕಳುಹಿಸಲಾಗಿದೆ.



ಇಳಕಲ್‌ ಬಳಿ ಪಾಪನಳ್ಳಿ ಗ್ರಾಮದ ಮಹಿಳೆಯೊಬ್ಬರು ಕೊಪ್ಪಳ ಜಿಲ್ಲೆಯ ಹುಲಿಗಿಯ ಹುಲಿಗೆಮ್ಮದೇವಿ ದರ್ಶನಕ್ಕೆಂದು ಬಂದಿದ್ದರು. ಬಸ್‌ಗಾಗಿ ಹುಲಿಗಿ ಕ್ರಾಸ್‌ ಬಳಿ ಸುಮಾರು ನಾಲ್ಕು ತಾಸು ಕಾಯ್ದರೂ ಬಸ್‌ಗಳನ್ನು ನಿಲ್ಲಿಸಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತ ಮಹಿಳೆ ಕೋಪದಿಂದ ಬಸ್‌ನತ್ತ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಮಳೆ ಬರುತ್ತಿತ್ತು "ಇಳಕಲ್‌ಗೆ ಹೋಗುವ ಬಸ್‌ಗಾಗಿ ನಾಲ್ಕೈದು ತಾಸಿನಿಂದ ಕಾದಿದ್ದೆ. ಹಲವು ಬಸ್‌ಗಳು ಹೋದರೂ ನಿಲ್ಲಿಸಲಿಲ್ಲ. ಇದರಿಂದ ಸಿಟ್ಟು ಬಂದು ಕಲ್ಲು ಎಸೆದೆ" ಎಂದು ಮಹಿಳೆ ಹೇಳಿದ್ದಾರೆ.



ಬಸ್‌ ಗಾಜು ಒಡೆದಿದ್ದಕ್ಕೆ ₹5,000 ದಂಡ ಕಟ್ಟಬೇಕು, ಇಲ್ಲವಾದರೆ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ ನಂತರ ಮಹಿಳೆ ಕ್ಷಮೆಯಾಗಿಸಿ ದಂಡ ಕಟ್ಟಿ ಅದೇ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ