LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ; 10 ಪ್ರಯಾಣಿಕರಿಗೆ ಗಂಭೀರ ಗಾಯ

ಗಂಗಾವತಿ, 29:  ಹೈದರಾಬಾದಿನಿಂದ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ಸೊಂದು ಗಂಗಾವತಿ ತಾಲೂಕಿನ ಹೇಮಗುಡ್ಡ ಎಚ್ ಆರ್ ಜಿ ನಗರದ ಹತ್ತಿರ ಪಲ್ಟಿಯಾಗಿ 10 ಪ್ರಯಾಣಿಕರು ತೀವ್ರ ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ಸುಮಾರು 7 ಗಂಟೆಗೆ ಜರುಗಿದೆ.



ಬಸ್ ಎದುರಿಗೆ ಬಂದ ಬೋಲೆರೋ ವಾಹನಕ್ಕೆ ಡಿಕ್ಕಿ ತಪ್ಪಿಸಲು ಚಾಲಕ ಪಕ್ಕಕ್ಕೆ ಬಸ್ಸನ್ನು ಚಲಿಸಿದ್ದರಿಂದ ಬಸ್ ಪಲ್ಟಿಯಾಗಿದೆ.



ಬಸ್ಸಿನಲ್ಲಿದ್ದ  50ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ 10 ಜನರಿಗೆ ತೀವ್ರ ಗಾಯಗಳಾಗಿವೆ. 8 ಜನರಿಗೆ ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಉಳಿದ ಇಬ್ಬರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ



ಸ್ಥಳಕ್ಕೆ ಗ್ರಾಮೀಣ ಪೊಲೀಸರು ಮತ್ತು ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸಗಳು ಆಗಮಿಸಿ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST