LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

13,133 ಪೌರ ಕಾರ್ಮಿಕರ ಖಾಯಂಗೆ ಸಂಪುಟದ ಒಪ್ಪಿಗೆ

ಬೆಂಗಳೂರು: ಮಹಾನಗರ ಸೇರಿದಂತೆ ರಾಜ್ಯದಲ್ಲಿ 13,133 ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.



13,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.



ನಗರಸಭೆಯ 5,533, ಪುರಸಭೆಗಳ 3,673 ಪೌರ ಕಾರ್ಮಿಕರ ಸೇವೆ ಖಾಯಂಗೊಳ್ಳಲಿದೆ. ಈ ನೌಕರರು ಈಗ 17,000-28,980 ರೂ. ವೇತನ ಶ್ರೇಣಿ ಅಡಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕರ ಕಾಯಂ ಆಗುತ್ತಿರುವುದು ರಾಜ್ಯದಲ್ಲಿ ಇದೇ ಮೊದಲು ಎನ್ನಲಾಗಿದೆ.



26,000 ಪೌರಕಾರ್ಮಿಕರನ್ನು ಸೇರ್ಪಡೆಗೊಳಿಸಿ, ಇದರಲ್ಲಿ ಕಸಗುಡಿಸುವವರನ್ನೂ ಸೇರಿಸಬೇಕು ಎಂಬ ಬೇಡಿಕೆ ಇತ್ತು. ಇದು ಮೊದಲ ಹಂತವಾಗಿದ್ದು, ಪೌರ ಕಾರ್ಮಿಕರ ಬೇಡಿಕೆಯಂತೆ ಉಳಿದ 12,800 ಪೌರಕಾರ್ಮಿಕರಿಗೆ ಶೀಘ್ರದಲ್ಲೇ ವಸತಿ ಕಲ್ಪಿಸಲಾಗುವುದು ಎಂದು ಸರ್ಕಾರ ಹೇಳಿದೆ.



ಎಲ್ಲಾ 26,000 ಜನರನ್ನು ಸೇರಿಸಬೇಕೆಂದು ನಾವು ಬಯಸಿದ್ದೇವೆ. ಇತರರಲ್ಲಿ ಲೋಡರ್‌ಗಳು, ಡ್ರೈವರ್‌ಗಳು ಮತ್ತು ಕ್ಲೀನರ್‌ಗಳು ಎಂದು ವರ್ಗೀಕರಿಸಲಾಗಿದೆ. ಇದನ್ನು ಪ್ರತ್ಯೇಕವಾಗಿ ವರ್ಗೀಕರಿಸಲು ಸಾಧ್ಯವಿಲ್ಲ ಎಂದು ಪೌರಕಾರ್ಮಿಕ ಸಮಿತಿಯ ಸದಸ್ಯ ಕ್ಲಿಪ್ಟಾನ್ ರೋಜಾರಿಯೋ ತಿಳಿಸಿದ್ದಾರೆ.



ಹಣಕಾಸಿನ ಸಮಸ್ಯೆಗಳಿದ್ದು, ಹೀಗಾಗಿ ನಾವು ಎಲ್ಲವನ್ನು ಒಂದೇ ಬಾರಿಗೆ ಸೇರ್ಪಡೆ ಮಾಡಲು ಸಾಧ್ಯವಾಗಲಿಲ್ಲ. ಉಳಿದ 12,800 ಸೇರ್ಪಡೆಗಾಗಿ ನಾವು ಕಾಯಬೇಕಾಗಿದೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.



ಸುಮಾರು 50 ಸಾವಿರ ಪೌರಕಾರ್ಮಿಕರು ತಮ್ಮ ಸೇವೆ ಕಾಯಂಗೊಳಿಸುವಂತೆ ಕೋರಿ ಸುಮಾರು ಮೂರು ತಿಂಗಳ ಹಿಂದೆ ಮುಷ್ಕರ ನಡೆಸಿದ್ದರು, ಅವರ ಬೇಡಿಕೆಗೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿ ಸಮಿತಿ ರಚಿಸಿರುವುದನ್ನು ಸ್ಮರಿಸಬಹುದಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ