LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಮಾನ ಅಪಘಾತ: ಉಪಮುಖ್ಯಮಂತ್ರಿ ಅಜಿತ ಪವಾರ ಸೇರಿ ಐವರ ದಾರುಣ ಸಾವು

ಪುಣೆ, ಜ, 28 : ಮಹಾರಾಷ್ಟ್ರ ರಾಜಕೀಯದಲ್ಲಿ ತೀವ್ರ ದುಃಖದ ಛಾಯೆ ಮೂಡಿದ್ದು, ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಅಜಿತ ಪವಾರ ಅವರು ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ತುರ್ತು ಲ್ಯಾಂಡಿಂಗ್ ವೇಳೆ ಅವರು ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನ ಪತನಗೊಂಡು, ಅಜಿತ್ ಪವಾರ್ ಸೇರಿ ಐವರು ಸಾವನ್ನಪ್ಪಿದ್ದಾರೆ.



ವಿಎಸ್‌ಆರ್ ಸಂಸ್ಥೆ ನಡೆಸುತ್ತಿದ್ದ ಲಿಯರ್‌ಜೆಟ್–45 (VT-SSK) ವಿಮಾನವು ಬೆಳಿಗ್ಗೆ ಸುಮಾರು 8.45ರ ಸುಮಾರಿಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲು ಯತ್ನಿಸುವ ವೇಳೆ ನಿಯಂತ್ರಣ ತಪ್ಪಿ ಪತನಗೊಂಡಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತಿಳಿಸಿದೆ. ವಿಮಾನದಲ್ಲಿ ಅಜಿತ ಪವಾರ ಜೊತೆಗೆ ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ಸಹಾಯಕ ಹಾಗೂ ಇಬ್ಬರು ವಿಮಾನ ಸಿಬ್ಬಂದಿ ಇದ್ದರು. ಅಪಘಾತದಲ್ಲಿ ಯಾರೂ ಬದುಕುಳಿಯಲಿಲ್ಲ ಎಂದು ಪ್ರಾಥಮಿಕ ವರದಿ ತಿಳಿಸಿದೆ.



ಅಜಿತ ಪವಾರ ಅವರು ಜಿಲ್ಲಾ ಪರಿಷತ್ ಚುನಾವಣೆಗೆ ಸಂಬಂಧಿಸಿದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಬಾರಾಮತಿಗೆ ತೆರಳುತ್ತಿದ್ದರು. ಮಂಗಳವಾರ ಅವರು ಮುಂಬೈನಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅಧ್ಯಕ್ಷತೆಯಲ್ಲಿ ನಡೆದ ಮಹಾರಾಷ್ಟ್ರ ಸಚಿವ ಸಂಪುಟದ ಮೂಲಸೌಕರ್ಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.



 “ವಿಮಾನ ನೆಲಕ್ಕೆ ಬಿದ್ದ ತಕ್ಷಣ ಭಾರೀ ಸ್ಫೋಟ ಸಂಭವಿಸಿತು. ಬೆಂಕಿ ತೀವ್ರವಾಗಿದ್ದರಿಂದ ರಕ್ಷಣಾ ಕಾರ್ಯ ಕಷ್ಟಕರವಾಯಿತು” ಎಂದು ಅಪಘಾತ ಸ್ಥಳದಲ್ಲಿದ್ದ ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.



ಅಪಘಾತದ ಸುದ್ದಿ ತಿಳಿದ ತಕ್ಷಣ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಶರದ ಪವಾರ ಅವರ ಪುತ್ರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಅವರು ಮಹಾರಾಷ್ಟ್ರಕ್ಕೆ ಹೊರಟಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪವಾರ ನಿವಾಸಕ್ಕೆ ಆಗಮಿಸುತ್ತಿದ್ದಾರೆ.



ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಹಲವು ನಾಯಕರು ಅಜಿತ ಪವಾರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿವಸೇನೆ (ಯುಬಿಟಿ) ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಈ ಘಟನೆಯನ್ನು “ಅಪಾರ ನಷ್ಟ” ಎಂದು ಬಣ್ಣಿಸಿದ್ದಾರೆ.



ರಾಜಕೀಯ ಕುಟುಂಬದಲ್ಲಿ ಜನಿಸಿದ ಅಜಿತ ಪವಾರ ಅವರು 1982ರಲ್ಲಿ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದ್ದರು. ನಾಲ್ಕು ದಶಕಗಳ ಕಾಲ ಮಹಾರಾಷ್ಟ್ರ ರಾಜಕೀಯದಲ್ಲಿ ಸಕ್ರಿಯರಾಗಿದ್ದ  ಅವರ ನಿಧನವು ರಾಜ್ಯ ರಾಜಕೀಯಕ್ಕೆ ತುಂಬಲಾಗದ ನಷ್ಟವಾಗಿ ಪರಿಣಮಿಸಿದೆ.





Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ