LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಘೋಷಣೆ

ಬೆಂಗಳೂರುನಲ್ಲಿ, ಮೇ 2 : ವೇತನ ಪರಿಷ್ಕರಣೆ ಮತ್ತು ಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿರಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ರಾಜ್ಯ ರಸ್ತೆ ಸಾರಿಗೆ, ವಾಯುವ್ಯ ರಸ್ತೆ ಸಾರಿಗೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಹಾಗೂ ಬಿಎಂಟಿಸಿ ನೌಕರರು ಒಟ್ಟಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ಅಡಚಣೆ ಉಂಟಾಗುವ ಸಾಧ್ಯತೆ ಹೆಚ್ಚಿದೆ.

ಸರ್ಕಾರ ಮತ್ತು ಸಂಘಟನೆಗಳ ನಡುವಿನ ಹಲವು ಸುತ್ತಿನ ಮಾತುಕತೆಗಳು ಫಲ ನೀಡದ ಹಿನ್ನೆಲೆಯಲ್ಲಿ ಮುಷ್ಕರ ಅನಿವಾರ್ಯವಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ಸ್ಪಷ್ಟಪಡಿಸಿದೆ.

ನೌಕರರ ಪ್ರಮುಖ ಬೇಡಿಕೆಗಳಲ್ಲಿ ಶೇ.25ರಷ್ಟು ವೇತನ ಹೆಚ್ಚಳ, 38 ತಿಂಗಳ ಬಾಕಿ ವೇತನ ಬಿಡುಗಡೆ ಹಾಗೂ ಇತರೆ ಸೌಲಭ್ಯಗಳನ್ನು ನಿಗದಿತ ಅವಧಿಯಲ್ಲಿ ಜಾರಿಗೆ ತರುವುದೂ ಸೇರಿವೆ. ಸರ್ಕಾರವು ಶೇ.7ರಷ್ಟು ವೇತನ ಹೆಚ್ಚಳವನ್ನು ಮುಂದಿರಿಸಿದರೂ, ಅದನ್ನು ನೌಕರರು ಒಪ್ಪಿಕೊಂಡಿಲ್ಲ.

ಹಿಂದಿನ ವೇತನ ಪರಿಷ್ಕರಣೆಯಂತೆ ಮೂಲ ವೇತನದಲ್ಲಿ ಶೇ.15ರಷ್ಟು ಹೆಚ್ಚಳ ಘೋಷಿಸಲಾಗಿದ್ದರೂ, ಅದರ ಬಾಕಿ ಪಾವತಿ ಇನ್ನೂ ನೆರವೇರಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ.

ಇತ್ತ ಸಾರಿಗೆ ಇಲಾಖೆ ಮುಷ್ಕರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ತವ್ಯಕ್ಕೆ ಗೈರು ಹಾಜರಾದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ. ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ನೌಕರರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ.

ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹಂತ ಹಂತವಾಗಿ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸರ್ಕಾರ ತಿಳಿಸಿದ್ದು, ಮುಷ್ಕರದ ಬದಲು ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

 

 

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಘೋಷಣೆಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್‌ ಎಚ್ಚರಿಕೆಉದ್ಯೋಗ ಸಿಗದೆ ಖಿನ್ನತೆ: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಆತ್ಮಹತ್ಯೆಕಮರ್ಷಿಯಲ್ ಗ್ಯಾಸ್ ದರ ಶೇ.50ರಿಂದ ಶೇ.60ರಷ್ಟು ಹೆಚ್ಚಳ!ಬೋಟ್ ದುರಂತದಲ್ಲಿ ಮನಕಲಕುವ ದೃಶ್ಯ: ಮಗುವನ್ನು ಎದೆಗವಚಿಕೊಂಡ ತಾಯಿಚುನಾವಣೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ: ಡಿ.ಕೆ.ಶಿವಕುಮಾರಮತ ಎಣಿಕೆಯಲ್ಲಿ ಕೇಂದ್ರ ಸಿಬ್ಬಂದಿ ನಿಯೋಜನೆಗೆ ಟಿಎಂಸಿ ವಿರೋಧ: ಅರ್ಜಿ ತಿರಸ್ಕರಿಸಿದ ಸುಪ್ರೀಮ ಕೋರ್ಟವಾಣಿಜ್ಯ ಎಲ್‌ಪಿಜಿ ಸಿಲಿಂಡರ 993ರೂ.ಹೆಚ್ಚಳ!ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ ‌ ರದ್ದು ಕೋರಿದ್ದ ಅರ್ಜಿ ಹಿಂಪಡೆದ ಎಚ್.ಡಿ. ರೇವಣ್ಣರಾಜಕೀಯ ಸಭೆಗಳಿಗೆ ಧಾರ್ಮಿಕ ಸ್ಥಳಗಳ ಬಳಕೆಗೆ ಅವಕಾಶ ಇಲ್ಲ : ಹೈಕೋರ್ಟ