LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ; ೨೪ ವಿದ್ಯಾರ್ಥಿಗಳ ಬಂಧನ

ಹೊಸದಿಲ್ಲಿ2002 ರ ಗುಜರಾತ್‌ ನರಸಂಹಾರ ಪ್ರಕರಣಕ್ಕೆ ಸಂಬಂಧಿಸಿದ ಬಿಬಿಸಿ ತಯಾರಿಸಿರುವ "ಇಂಡಿಯಾ : ದಿ ಮೋದಿ ಕ್ವೆಶ್ಚನ್" ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯೋಜನೆ ರೂಪಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ 24 ವಿದ್ಯಾರ್ಥಿಗಳನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿಯನ್ನು  ನೀಡಿದ್ದಾರೆ.



ಜೆಎನ್ ಯು ಹಾಗೂ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿವಿಗಳಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನದ ವಿಷಯವಾಗಿ ಗಲಾಟೆ ಉಂಟಾಗಿತ್ತು. ಈ ಬೆನ್ನಲ್ಲೇ ದೆಹಲಿ ವಿವಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಬೆಳವಣಿಗೆ ನಡೆದಿದೆ.



ಸಂಜೆ 4 ಗಂಟೆ ವೇಳೆಗೆ 20 ಮಂದಿ ಕಲಾ ವಿಭಾಗದಿಂದ ಹೊರಬಂದು ನಿರ್ಬಂಧಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯತ್ನಿಸಿದರು. ಈ ನಡೆ ಶಾಂತಿ ಹಾಗೂ ಪ್ರಶಾಂತ ವಾತಾವರಣ ಕದಡುವ ಸಾಧ್ಯತೆ ಇರುವುದರಿಂದ ಅವರನ್ನು ಅಲ್ಲಿಂದ ತೆರಳುವಂತೆ ಹೇಳಲಾಯಿತು. ಆದರೆ ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಂತಿಯುತವಾಗಿ ವಶಕ್ಕೆ ಪಡೆಯಲಾಯಿತು ಎಂದು ಉತ್ತರ ವಿಭಾಗದ ಉಪ ಆಯುಕ್ತ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ