LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಳೆಗೆ ಬೆಳಗಾವಿ ಜಿಲ್ಲೆಯಲ್ಲಿ 2ನೇ ಸಾವು

ಬೆಳಗಾವಿ : ಕಳೆದ ಹತ್ತು ದಿನಗಳಿಂದ ಜಿಲ್ಲೆಯ ಕೆಲವು ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಈ ವರೆಗೆ ಇಬ್ಬರು ಬಲಿಯಾಗಿದ್ದಾರೆ. ತುಂತುರು ಮಳೆಗೆ ನೆನೆದಿದ್ದ ಮನೆಯ ಗೋಡೆ ಕುಸಿದು 23-ವರುಷದ ವ್ಯಕ್ತಿ ಅಸುನೀಗಿದ ಘಟನೆ ಅಥಣಿ ಪಟ್ಟಣದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.



ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ ಮೃತರಾದವರು. ಮಲಗಿದ್ದಾಗ ಮನೆಯ ಗೋಡೆಯ ಕುಸಿದು ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.



ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ತೆರಳಿ ಪರಿಶೀಲನೆ ಮಾಡಿದರು. ಅಥಣಿ ಶಾಸಕರ ಪರವಾಗಿ ಮುಖಂಡ‌ ಚಿದಾನಂದ ಸವದಿ ಭೇಟಿ ನೀಡಿ ಸಾಂತ್ವಾನ ಹೇಳಿದರು.



ಕಳೆದ ಸೋಮವಾರ ರಾತ್ರಿ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದ ಮನೆ ಕುಸಿದು 15-ಜನ ಗಾಯಗೊಂಡಿದ್ದರು. ಗಾಯಗೊಂಡಿದ್ದ 95-ವರುಷದ ಈರಮ್ಮ ಪತ್ರೆಯವರ ಎಂಬವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಸಾವಿಗೀಡಾಗಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ