LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೇರೆ ಮದುವೆಯಾದರೆ ನಗ್ನ ಫೋಟೋ ವೈರಲ್ ಮಾಡುವುದಾಗಿ ಮೊಬೈಲ್ ಕಸಿದುಕೊಂಡು ಹೋದ ಅತ್ಯಾಚಾರಿಗೆ 30 ವರ್ಷ ಜೈಲು

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪಿಗೆ 30 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 2,63,000 ರೂ. ದಂಡ ವಿಧಿಸಿ ಇಲ್ಲಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ- 01 ಶನಿವಾರ ಆದೇಶ ಹೊರಡಿಸಿದೆ. ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ ತಾಲೂಕಿನ ಚೆನ್ನಿಕೊಪ್ಪಿ ಗ್ರಾಮದ ಸ್ವಪ್ನಿಲ್ ರಾಜಾರಾಮ ಮಾನೆ (ವಯಸ್ಸು 23) ಶಿಕ್ಷೆಗೊಳಗಾದ ಆರೋಪಿ. ಈತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ಮದುವೆ ಆಗುವುದಾಗಿ ಹೇಳಿ ಒತ್ತಾಯದಿಂದ ಲೈಂಗಿಕ ಅತ್ಯಾಚಾರ ಮಾಡಿದ್ದ. ಅವಳ ನಗ್ನ ಫೋಟೋಗಳನ್ನು ತೆಗೆದು ವಾಟ್ಸಾಪ್ ಮೂಲಕ ಅವರ ಮನೆಯವರ ನಂಬರ್ ಗೆ ಕಳಿಸಿಕೊಟ್ಟು ಬೆದರಿಸಿದ್ದ. ಮೇಲಿಂದ ಮೇಲೆ ಲೈಂಗಿಕ ಅತ್ಯಾಚಾರ ಮಾಡುತ್ತಾ, ಬಾಲಕಿಗೆ ನೀನೇನಾದರೂ ಬೇರೆ ಮದುವೆ ಆದರೆ ನಾನು ನಿನ್ನ ಫೋಟೋಗಳನ್ನು ವೈರಲ್ ಮಾಡುತ್ತೇನೆ ಎಂದು ಹೇಳಿ ಬಾಲಕಿಯ ಮೊಬೈಲ್ ಕಸಿದುಕೊಂಡು ಹೋಗಿರುವ ಅಪರಾಧಕ್ಕೆ ಸಂಬಂಧಿಸಿದ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಪಿಎಸ್ಐ ಬಸಗೌಡ ನೇರ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಸಿಪಿಐ ವಿಶ್ವನಾಥ ಚೌಗುಲೆ ಮುಂದಿನ ತನಿಖೆ ನಡೆಸಿದ್ದರು. ಮಾನ್ಯ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಪ್ರಕರಣವನ್ನು ವಿಚಾರಣೆ ಮಾಡಿ ಒಟ್ಟು 11 ಸಾಕ್ಷಿಗಳ ವಿಚಾರಣೆ, 84 ದಾಖಲೆ, 13 ಮುದ್ದೆಮಾಲು ಆಧಾರದ ಮೇಲೆ ಆರೋಪಿ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು ತೀರ್ಪು ನೀಡಿದ್ದಾರೆ. ಪೋಕ್ಸೊ ಕಲಂ 6 ರ ಪ್ರಕಾರ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡದ ಹಣ ತುಂಬದೇ ಇದ್ದ ಕಾಲಕ್ಕೆ ಎರಡು ವರ್ಷಗಳ ಒಂದು ವೇಳೆ ಆತ ದಂಡದ ಹಣ ತುಂಬದೇ ಇದ್ದಲ್ಲಿ ಎರಡು ವರ್ಷಗಳ ಶಿಕ್ಷೆ ಮತ್ತು ಕಲಂ 67 (ಬಿ) ಅಡಿ ಐದು ವರ್ಷಗಳ ಕಾರಾಗೃಹ ಶಿಕ್ಷೆ, ರೂ. 1 ಲಕ್ಷ ದಂಡ ತುಂಬದೇ ಇದ್ದ ಕಾಲಕ್ಕೆ ಎರಡು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.



ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂ.4 ಲಕ್ಷಗಳನ್ನು ಪರಿಹಾರ ಧನವಾಗಿ ಪಡೆಯಲು ನ್ಯಾಯಾಲಯ ಆದೇಶಿಸಿದೆ. ವಿಶೇಷ ಸರಕಾರಿ ಅಭಿಯೋಜಕ ಎಲ್.ವಿ. ಪಾಟೀಲ ಪ್ರಕರಣ ನಡೆಸಿ ವಾದ ಮಂಡಿಸಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು