LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಹಿಳಾ ಸಂಘದ ಹೆಸರಲ್ಲಿ ₹43.40 ಲಕ್ಷ ವಂಚನೆ: ಇಬ್ಬರು ಮಹಿಳೆಯರ ಬಂಧನ

ಬಾಗಲಕೋಟ, 15: ಮಹಿಳಾ ಸಂಘಟನೆಯ ಹೆಸರಲ್ಲಿ ಸಾರ್ವಜನಿಕರಿಂದ ಹೂಡಿಕೆ ಸಂಗ್ರಹಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ರಚನಾ ಬಂಟನೂರ ಹಾಗೂ ವಿದ್ಯಾಶ್ರೀ ಹಲ್ಲೂರು ಎಂದು ಗುರುತಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೀಳಗಿ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಶ್ರೀ ದುರ್ಗಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ’ ಸಾರ್ವಜನಿಕರಿಗೆ ಆಕರ್ಷಕ ಲಾಭಾಂಶದ ಭರವಸೆ ನೀಡಿ ಹಣ ಸಂಗ್ರಹಿಸಿ ವಂಚಿಸಿರುವ ಕುರಿತು ಬೀಳಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಗ್ರಾಮೀಣ ಭಾಗದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸಣ್ಣ ಗುಂಪುಗಳನ್ನು ರಚಿಸಿದ್ದ ಸಂಸ್ಥೆ, ಮೂರು ವರ್ಷಗಳ ಬಳಿಕ ಹೆಚ್ಚಿನ ಮೊತ್ತವನ್ನು ಮರಳಿಸುವುದಾಗಿ ನಂಬಿಸಿತ್ತು. ಇದನ್ನು ನಂಬಿದ ನೂರಾರು ಮಹಿಳೆಯರು ತಮ್ಮ ದುಡಿಮೆಯ ಹಣವನ್ನು ವಾರದ ಹಾಗೂ ತಿಂಗಳ ಕಂತುಗಳ ರೂಪದಲ್ಲಿ ಹೂಡಿಕೆ ಮಾಡಿದ್ದರು.

ಸಂತ್ರಸ್ತ ಮಹಿಳೆಯರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸಂಸ್ಥೆಯ ಕಚೇರಿಯ ಮೇಲೆ ದಾಳಿ ನಡೆಸಿ, ಅಕ್ರಮ ವ್ಯವಹಾರಕ್ಕೆ ಬಳಸಲಾಗುತ್ತಿದ್ದ 200ಕ್ಕೂ ಹೆಚ್ಚು ರಿಜಿಸ್ಟರ್‌ಗಳು, ರಸೀದಿ ಪುಸ್ತಕಗಳು, ಕಂಪ್ಯೂಟರ್‌ಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಸಹಕಾರ ಸಂಘಗಳ ಜಿಲ್ಲಾ ನಿಬಂಧಕರು ಸ್ಥಳಕ್ಕೆ ಭೇಟಿ ನೀಡಿ ಜಪ್ತಿ ಮಾಡಲಾದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ವಶಪಡಿಸಿಕೊಂಡ ದಾಖಲೆಗಳು ಮತ್ತು ಸಂತ್ರಸ್ತರ ಹೇಳಿಕೆಗಳ ಆಧಾರದ ಮೇಲೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಸುಮಾರು ₹43.40 ಲಕ್ಷ ವಂಚನೆಯಾಗಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಸಂಸ್ಥೆಯ ಅಧಿಕೃತ ಆಡಿಟರ್ ಸೇರಿ ಒಟ್ಟು ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಎಂಟು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ರೂ. ವಂಚನೆ ಪ್ರಕರಣ!ಬೆಳಗಾವಿಯಲ್ಲಿ ಗುಂಡಿನ ದಾಳಿ: ಆರೋಪಿಗಳ ಬಂಧನಕ್ಕೆ ಎರಡು ವಿಶೇಷ ತಂಡ ರಚನೆಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಉಮಾ ಶಂಕರಿಸೋನಮ್ ವಾಂಗಚುಕ್ ಆರೋಗ್ಯ ಗಂಭೀರ; ಬಲವಂತವಾಗಿ ಆಹಾರ ನೀಡುವಂತೆ ದೆಹಲಿ ಹೈಕೋರ್ಟನಲ್ಲಿ ಅರ್ಜಿಇ.ಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದ ಮದನ್ ಮಿತ್ರಾಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿ