LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆನಲೈನ್ ನಲ್ಲಿ ವಿದ್ಯುತ್ ಬಿಲ್ ತುಂಬಲು ಹೋದ ವ್ಯಕ್ತಿಗೆ 5.36 ಲಕ್ಷ ರೂ. ವಂಚನೆ!

ಶಿವಮೊಗ್ಗ, ೨೧- ಆನಲೈನ್ ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಹೋದ ವ್ಯಕ್ತಿಯೊಬ್ಬರು 5 ಲಕ್ಷ 36 ಸಾವಿರ ರೂಪಾಯಿ ವಂಚನೆಗೊಳಗಾಗಿದ್ದು, ಇಂತಹದೊಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ.



ಗುಂಡಪ್ಪ ಶೆಡ್ ನಿವಾಸಿಯಾದ ಈ ವ್ಯಕ್ತಿಗೆ ಅವರ ಸಹೋದರ ಸಂದೇಶವೊಂದನ್ನು ಫಾರ್ವರ್ಡ ಮಾಡಿದ್ದು, ವಿದ್ಯುತ್ ಬಿಲ್ ಪಾವತಿಸುವಂತೆ ತಿಳಿಸಿದ್ದರು ಎನ್ನಲಾಗಿದೆ.



ಸಂದೇಶದಲ್ಲಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದ ವೇಳೆ ಎನಿ ಡೆಸ್ಕ್ ಆಪ್ ಡೌನ್ಲೋಡ್ ಮಾಡಲು ಸೂಚಿಸಲಾಗಿದ್ದು, ಅದರಂತೆ ಡೌನ್ಲೋಡ್ ಮಾಡಿ ನಂಬರ್ ತಿಳಿಸಿದ್ದಾರೆ.



ಕೂಡಲೇ ಎನಿ ಡೆಸ್ಕ್ ಮೂಲಕ ತನ್ನ ವಶಕ್ಕೆ ಪಡೆದ ವಂಚಕ, ಬ್ಯಾಂಕ್ ಖಾತೆಯಿಂದ 2 ರೂಪಾಯಿ ಪಾವತಿಸಲು ಹೇಳಿದ್ದಾನೆ. ಆ ಕಾರ್ಯ ಮಾಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಬರೋಬ್ಬರಿ 5.36 ಲಕ್ಷ ರೂಪಾಯಿಗಳನ್ನು ವರ್ಗಾಯಿಸಿಕೊಂಡಿದ್ದಾನೆ. ಇದೀಗ ವಂಚನೆಗೊಳಗಾದ ವ್ಯಕ್ತಿ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ