LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಇನ್ನೂ 5 ದಿನ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಲಿದೆ.



ರಾಜಧಾನಿ ಬೆಂಗಳೂರಿನಲ್ಲಿ 5 ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿಯೂ ಇಂದಿನಿಂದ 5 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ 3 ದಿನ ಮಳೆಯಾಗಲಿದ್ದರೆ, ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮತ್ತೆ ಅವಾಂತರಗಳು ಸೃಷ್ಟಿಯಾಗಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನೂ 5 ದಿನ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜನರು ಆತಂಕಕ್ಕೀಡಾಗಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ