LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸರಕಾರಿ ಕಚೇರಿಯಲ್ಲಿ ಸಾರಾಯಿ ಪಾರ್ಟಿ ಮಾಡಿದ್ದ 7 ಜನ ಅಮಾನತು

ಬೆಳಗಾವಿ, ಅಕ್ಟೋಬರ 12- ಟಿಳಕವಾಡಿಯಲ್ಲಿರುವ ವ್ಯಾಕ್ಸಿನ್ ಡಿಪೋದ ಆವರಣದಲ್ಲಿನ ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಅಲ್ಲಿನ ಸಿಬ್ಬಂದಿ ಕಳೆದ ಮಹಾತ್ಮಾ ಗಾಂಧಿ ಜಯಂತಿ ದಿನದಂದು ಕಚೇರಿಯ ಹಿಂಬದಿಯ ಹಾಲ್ ನಲ್ಲಿ ಮಾಡಿದ್ದಾರೆನ್ನಲಾದ ಮದ್ಯಪಾನ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಏಳು ಸಿಬ್ಬಂದಿಯನ್ನು ಆರೋಗ್ಯ ಇಲಾಖೆ ಅಮಾನತ್ತು ಮಾಡಿದೆ.



ಬೆಳಗಾವಿ ಮುಖ್ಯ ಆರೋಗ್ಯಾಧಿಕಾರಿ ಡಾ.‌ ಮಹೇಶ ಕೋಣಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ‌.



ಗಾಂಧಿ ಜಯಂತಿಯ ದಿನದಂದು ಜಿಲ್ಲಾಡಳಿತ ಮದ್ಯ, ಮಾಂಸ ಮಾರಾಟ ನಿಷೇಧ ಮಾಡಿರುತ್ತದೆ. ಜಿಲ್ಲೆಯ ಜನರ ಆರೋಗ್ಯ ಕಾಪಾಡಬೇಕಿದ್ದ ಆರೋಗ್ಯ ಇಲಾಖೆಯ ಅಧಿಕಾರಿಗಳು ಮದ್ಯದೊಂದಿಗೆ ಮಾಂಸದೂಟ ಕೂಡ ಮಾಡಿದ್ದಾರೆನ್ನಲಾಗಿದೆ. ಈ ವಿಷಯ ಪತ್ರಿಕೆಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿ ವೈರಲ್ ಆಗಿತ್ತು.



ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೋಣಿಯವರ ಕಾರು ಚಾಲಕ ಮಂಜುನಾಥ ಪಾಟೀಲ ಮತ್ತು ಸಿಬ್ಬಂದಿ ಮಹೇಶ ಹಿರೇಮಠ, ಅನಿಲ ತಿಪ್ಪನ್ನವರ, ರಮೇಶ ನಾಯಕ, ಯಲ್ಲಪ್ಪ ಮುನವಳ್ಳಿ, ದೀಪಕ ಗಾವಡೆ ಸೇರಿ ಏಳು ಜನರನ್ನು ಅಮಾನತ್ತು ಮಾಡಲಾಗಿದೆ.



ಸರಕಾರಿ ಕಚೇರಿಯಲ್ಲಿ  ಮದ್ಯಪಾನಗೋಷ್ಠಿ ನಡೆದಿರುವುದನ್ನು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೋಣಿ ಅವರು ಒಪ್ಪಿಕೊಂಡಿದ್ದಾರೆ. ಆದರೆ ಅದು ಮಹಾತ್ಮಾ ಗಾಂಧಿ ಜಯಂತಿಯ ದಿನವಲ್ಲ, ಬದಲಾಗಿ ಏಳು ತಿಂಗಳ ಹಿಂದಿನದಾಗಿದೆ, ಆದರೂ ಈಗ ಬೆಳಕಿಗೆ ಬಂದಿದ್ದರಿಂದ ಪಾರ್ಟಿ ಮಾಡಿದವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಡಾ. ಕೋಣಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ