LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಟ್ರಕ್ ಮತ್ತು ಆಟೋ ಡಿಕ್ಕಿ : 7 ಕಾರ್ಮಿಕ ಮಹಿಳೆಯರ ಸಾವು

ಬೀದರ್ : ಟ್ರಕ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಬೆಮ್ಮಳಖೇಡ ಬಳಿ ನಡೆದಿದೆ.



ಟ್ರಕ್ ಮತ್ತು ಆಟೋದ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಕೂಲಿ ಕಾರ್ಮಿಕ ಮಹಿಳೆಯರು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.



ಮೃತರನ್ನು ಪ್ರಭಾವತಿ(36), ಜಕ್ಕಮ್ಮ(32), ರುಕ್ಮಿಣಿ (60), ಯಾದಮ್ಮ(40), ಗುಂಡಮ್ಮ(52) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಹೆಸರು ಪತ್ತೆಯಾಗಿಲ್ಲ. ಇದೇ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ



ಈ ಅಪಘಾತದಲ್ಲಿ ಮೃತಪಟ್ಟಿರುವ ಚಿಟಗುಪ್ಪ ತಾಲೂಕಿನ ಉಡುಮನಳ್ಳಿ ಮೂಲದವರು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾಹಿತಿ ನೀಡಿದ್ದಾರೆ.



ಅಪಘಾತದಲ್ಲಿ ಮೃತಪಟ್ಟವರೆಲ್ಲ ಕೂಲಿ ಕಾರ್ಮಿಕರೇ ಆಗಿದ್ದಾರೆ. ದಿನನಿತ್ಯದ ಕೂಲಿ ಕೆಲಸವನ್ನು ಮುಗಿಸಿಕೊಂಡು ಆಟೋದಲ್ಲಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಬೆಮ್ಮಳಖೇಡ ಬಳಿ ಟ್ರಕ್  ಆಟೋಗೆ ಬಂದು ಡಿಕ್ಕಿ ಹೊಡೆದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ