LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ಅವಧಿಯಲ್ಲಿ 85% ಕಮಿಷನ್ : ಬೊಮ್ಮಾಯಿ 

ಬಳ್ಳಾರಿ : ಕಾಂಗ್ರೆಸ್ ನವರ ಅಧಿಕಾರದ ಅವಧಿಯಲ್ಲಿ 85 ಪರ್ಸೆಂಟ್ ಕಮಿಷನ್ ಇತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.



ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಇಂದು ಆಯೋಜಿಸಲಾಗಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರ ತಂದೆ ರಾಜೀವ ಗಾಂಧಿ ಅವರೇ ಹೇಳಿದ್ದರು. ದೆಹಲಿಯಿಂದ 100 ರೂಪಾಯಿ ಕಳಿಸಿದರೆ ಹಳ್ಳಿಗಳಿಗೆ 15 ರೂಪಾಯಿ ತಲುಪುತ್ತಿತ್ತು ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದರು ಎಂದರು.



ರಾಜೀವ ಗಾಂಧಿ ಈ ಮಾತು ಹೇಳಿದ ವೇಳೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಆದರೆ ಇದೀಗ ನರೇಂದ್ರ ಮೋದಿಯವರ ಸರ್ಕಾರ ಬಂದ ನಂತರ ಎಲ್ಲಾ ಯೋಜನೆಗಳ ಫಲಾನುಭವಿಗಳಿಗೆ ಡಿಬಿಟಿ ವ್ಯವಸ್ಥೆ ಮೂಲಕ ಶೇಕಡ 100 ರಷ್ಟು ಮೊತ್ತ ತಲುಪುತ್ತಿದೆ ಎಂದು ಹೇಳಿದರು.



ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭೂಮಿ, ಆಕಾಶ ಹಾಗೂ ಪಾತಾಳದಲ್ಲಿಯೂ ಭ್ರಷ್ಟಾಚಾರ ನಡೆಸಿದೆ. ಆಕಾಶದ ಭ್ರಷ್ಟಾಚಾರ ಎಂದರೆ 2ಜಿ ಹಗರಣ, ಕಾಮನ್ವೆಲ್ತ್ ಗೇಮ್ಸ ಭೂಮಿ ಮೇಲಿನ ಹಗರಣ ಹಾಗೂ ಪಾತಾಳದಲ್ಲಿ ಭ್ರಷ್ಟಾಚಾರವೆಂದರೆ ಕಲ್ಲಿದ್ದಲು ಹಗರಣ ಎಂದು ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ