LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಾಲೆಯಲ್ಲೇ ಕುಸಿದು ಬಿದ್ದು 6 ವರ್ಷದ ವಿದ್ಯಾರ್ಥಿ ಸಾವು

ಶಿವಮೊಗ್ಗ, ಜೂ.15 : ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ.

ತ್ರಿಲೋಕ್ ಜೈನ್ (6) ಮೃತ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾಗಿದ್ದ ತ್ರಿಲೋಕ್, ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ವೇಳೆಯಲ್ಲಿ ಶಾಲಾ ಆವರಣದಲ್ಲಿ ಇತರ ಮಕ್ಕಳೊಂದಿಗೆ ಇದ್ದ ವೇಳೆ ತ್ರಿಲೋಕ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬಾಲಕನ ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗಿದ್ದು, ನಿಖರ ಕಾರಣ ವೈದ್ಯಕೀಯ ವರದಿಯ ಬಳಿಕವೇ ತಿಳಿಯಲಿದೆ.

ಮುದ್ದು ಮಗನನ್ನು ಕಳೆದುಕೊಂಡ ತಂದೆ-ತಾಯಿ ಹಾಗೂ ಕುಟುಂಬಸ್ಥರ ಆಕ್ರಂದನ ಮನಕಲಕುವಂತಿತ್ತು. ಬಾಲಕನ ಅಕಾಲಿಕ ನಿಧನದಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST