LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಾವೇರಿ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ ಬಸ್ಸು

ಹಾವೇರಿ: ನಗರದ  ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.  ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್ ಅಲಿಗೆ ತೀವ್ರವಾಗಿ ಗಾಯಗಳಾಗಿದ್ದು, ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಉಳಿದ ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಅಪಘಾತದ ಭೀಕರತೆಯನ್ನು ಸಾರಿ ಹೇಳುತ್ತಿವೆ.  ಸಾರ್ವಜನಿಕರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ದಿನಾಂಕ: 01/04/2026 ರಂದು ಮುಂಜಾನೆ ಸುಮಾರು 06-30 ಗಂಟೆಗೆ ಕೆಎಸ್‌ಆರ್‌ಟಿಸಿ ಬಸ್ ನಂಬರ ಕೆಎ.27/ಎಫ್.0665ನ ಚಾಲಕ ಮಂಜುನಾಥ ಆರ್ ತಂದೆ ರಾಜಪ್ಪ,ಹಾವೇರಿ ಕೆಎಸ್‌ಆರ್‌ಟಿಸಿ ಬಸ್ಟ್ಯಾಂಡ ಒಳಗೆ ಖುಲ್ಲಾ ಜಾಗೆ ಕಡೆಯಿಂದ ಪ್ಲಾಟ್ ಫಾರ್ಮ ನಂ 2 ನೇದ್ದರ ಕಡೆಗೆ ಬಹಳ ವೇಗವಾಗಿ ಮತ್ತು ನಿರ್ಲಕ್ಷ ತಾತ್ಸಾರತನದಿಂದ ಓಡಿಸಿಕೊಂಡು ಹೋಗಿ 2 ನೇ ಪ್ಲಾಟ್ ಫಾರ್ಮ ಕಟ್ಟಿಯನ್ನು ಹತ್ತಿಸಿಕೊಂಡು ಹೋಗಿ ಸದರ ಪ್ಲಾಟ್ ಫಾರ್ಮ ಕಟ್ಟಿಯ ಮೇಲೆ ಇದ್ದ 1] ವಾಸುದೇವ ತಂದೆ ಗುರುನಾಥಪ್ಪ ಉತಳೆಕರ್ 2] ಹರ್ಷಾ ತಂದೆ ವಾಸುದೇವ ಉತಳೆಕರ್ 3] ಕಾವ್ಯಂಜಲಿ ಗಂಡ ವಿಷ್ಣು ಉತಳೆಕರ್ 4] ಆರಬಜಖಾನ್ ತಂದೆ ಖಾಜಾಮೋದಿನಸಾಬ್ ಸೌದಾಗರ 5] ಹಜರತಅಲಿ ತಂದೆ ಇಸ್ಮಾಯಿಲ್ ರಾಯಚೂರ ವಯಸ್ಸು 2.1/2 ವರ್ಷ ಸಾಃ ಸವಣೂರ ಈ ಐದು ಜನರಿಗೆ ಅಪಘಾತವಾಗಿದ್ದು ಬಸ್ಸಿಗೂ ಮುಂದೆ  ಡೆಂಟ ಆಗಿದೆ ಸದರಿ ಎಲ್ಲಾ ಗಾಯಾಳುಗಳು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಉಪಚಾರ ಪಡೆದುಕೊಂಡು ಒಬ್ಬ ಗಾಯಾಳು ಹಜರತಅಲಿ ತಂದೆ ಇಸ್ಮಾಯಿಲ್ ರಾಯಚೂರ ಅವನಿಗೆ ಹೆಚ್ಚಿನ ಉಪಚಾರಕ್ಕೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಈ ದಿವಸ ದಿಃ 01/04/2026 ರಂದು ಮುಂಜಾನೆ 9-02 ಗಂಟೆಗೆ ಮರಣ ಹೊಂದಿದ್ದಾರೆ. ಹಾವೇರಿ ಸಂಚಾರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು