ಕರೆನಾಡು ಪ್ರದೇಶದ ಯುವಕ ಪ್ರತಿದಿನ ಬಾಲಕಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ. ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ಪೋಷಕರಿಗೆ ಹೇಳಿದ್ದಳು. ಯುವಕನನ್ನು ಹಿಡಿದ ಪೋಷಕರು, ಜನರು ಆತನನ್ನು ಕಂಬಕ್ಕೆ ಕಟ್ಟಿಹಾಕಿ ಮನ ಬಂದಂತೆ ಹೊಡೆದ ಬಳಿಕ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಯುವಕನ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.