LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಗೋ ಮೂತ್ರದಿಂದ ಟ್ಯಾಂಕ್ ಸ್ವಚ್ಛಗೊಳಿಸಿದ ಸವರ್ಣೀಯರು

ಚಾಮರಾಜನಗರ : ದಲಿತ ಮಹಿಳೆ ಟ್ಯಾಂಕ್ ನಿಂದ ನೀರು ಕುಡಿದರೆಂಬ ಕಾರಣಕ್ಕೆ ಟ್ಯಾಂಕ್ ಅನ್ನು ಖಾಲಿ ಮಾಡಿಸಿ ಸ್ವಚ್ಛಗೊಳಿಸಿರುವ ಘಟನೆ ಚಾಮರಾಜನಗರ ತಾಲೂಕಿನ‌ ಹೆಗ್ಗೋಠಾರ ಗ್ರಾಮದಲ್ಲಿ ನಡೆದಿದೆ.



ದಲಿತ ಯುವಕನ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ವಧುವಿನ ಕಡೆಯಿಂದ ಎಚ್‌.ಡಿ.ಕೋಟೆ ತಾಲ್ಲೂಕಿನ ಸರಗೂರಿನಿಂದ ಮಹಿಳೆಯು ಬಂದಿದ್ದರು.



ಈ ವೇಳೆ ಮಧ್ಯಾಹ್ನದ ಊಟ ಮುಗಿಸಿ ಬಸ್‌ಗೆ ಹೋಗುವ ಸಂದರ್ಭದಲ್ಲಿ ಆ ಮಹಿಳೆ ಗ್ರಾಮದ ಸವರ್ಣೀಯರ ಬೀದಿಯಲ್ಲಿನ ತೊಂಬೆಯ ನಲ್ಲಿಯಲ್ಲಿ ನೀರು ಕುಡಿದಿದ್ದಾರೆ. ಅದೇ ಬೀದಿಯವರು ಇದನ್ನು ನೋಡಿದ್ದಾರೆ.



ಆ ಮಹಿಳೆ ದಲಿತ ಸಮುದಾಯದವಳು ಎಂದು ಗೊತ್ತಾಗುತ್ತಿದ್ದಂತೆ ನೀರನ್ನು ಖಾಲಿ ಮಾಡಿಸಿ ಗೋ ಮೂತ್ರದಿಂದ ತೊಳೆದಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.



ಈ ಸುದ್ದಿ ಹರಡುತ್ತಿದ್ದಂತೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆಗೆ ಆದೇಶಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST