LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಸತಿ ಶಾಲಾ ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ, ದೊಣ್ಣೆಯಿಂದ ಥಳಿಸಿದ ರಾಕ್ಷಸ

ತುಮಕೂರು: ವಸತಿ ಶಾಲೆಯೊಂದರ ಮಕ್ಕಳ ಮೇಲೆ ವ್ಯಕ್ತಿಯೋರ್ವ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.



ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ಸರ್ಕಾರಿ ಅನುದಾನಿತ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಕಾರ್ಯದರ್ಶಿ ಎನ್.ಮೂರ್ತಿ ಅವರ ಪುತ್ರ ಭರತ ಈ ಕೃತ್ಯವೆಸಗಿದ್ದು, ಕುಡಿದ ಅಮಲಿನಲ್ಲಿ ವಸತಿ ಶಾಲೆಯ 40 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ ಹಾಗೂ ದೊಣ್ಣೆಯಿಂದ ಮನಬಂದಂತೆ ಹೊಡೆದಿದ್ದಾನೆ.



ಹಲ್ಲೆ ಘಟನೆಯನ್ನು ಶಾಲಾ ಆಡಳಿತ ಮಂಡಳಿ ಮುಚ್ಚಿಟ್ಟಿತ್ತು. ಘಟನೆ ನಡೆದ ಮೂರು ದಿನಗಳ ಬಳಿಕ ಹಲ್ಲೆಗೊಳಗಾದ ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಧಾವಿಸಿದ್ದಾರೆ. ಈಗ ಆರೋಪಿ ಭರತ ಪರಾರಿಯಾಗಿದ್ದಾನೆ.



ಪ್ರಕರಣ ದಾಖಲಿಸಿಕೊಂಡಿರುವ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಭರತಗಾಗಿ ಹುಡುಕಾಟ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು