LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಜಾತ್ರೆಯಲ್ಲಿ ಜಗಳ; ಬಿಜೆಪಿ ಕಾರ್ಯಕರ್ತನ ಕೊಲೆ

ಧಾರವಾಡ : ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ಕೋಟೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರ ಹತ್ಯೆಯಾಗಿದೆ. ಅವರಿಗೆ 36 ವರುಷ ವಯಸ್ಸಾಗಿತ್ತು.



ಬಿಜೆಪಿಯ ಕಾರ್ಯಕರ್ತರಾಗಿದ್ದ ಪ್ರವೀಣ ಕಮ್ಮಾರ ಮಂಗಳವಾರ ಅಮೃತ ದೇಸಾಯಿ ಅವರ ನಾಮಪತ್ರ ಸಲ್ಲಿಕೆಯ ರ್ಯಾಲಿಯಲ್ಲೂ ಭಾಗಿಯಾಗಿದ್ದರು. ಅದೇ ದಿನ ರಾತ್ರಿ ಕೋಟೂರಿನಲ್ಲಿ ನಡೆದ ಗ್ರಾಮದ ಉಡಚಮ್ಮದೇವಿ ಜಾತ್ರೆ ಸಂದರ್ಭದಲ್ಲಿ ಪ್ರಸಾದ ವಿತರಣೆ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದೆ. ಪ್ರವೀಣ ಅವರು ಮಧ್ಯ ಪ್ರವೇಶಿಸಿ ಜಗಳ ಬಿಡಿಸಿದ್ದ ಎನ್ನಲಾಗಿದೆ.



ಆದರೆ, ಮದ್ಯದ ಅಮಲಿನಲ್ಲಿ ಜಗಳ ಮಾಡಿದ್ದ ಗುಂಪು ನಂತರ ಪ್ರವೀಣ ಕಮ್ಮಾರ ಅವರಿಗೆ ಚಾಕುವಿನಿಂದ ಇರಿದು ತೀವ್ರ ಗಾಯಗೊಳಿಸಿ ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ ಅವರನ್ನು ಚಿಕಿತ್ಸೆಗಾಗಿ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬುಧವಾರ ನಸುಕಿನ ಜಾವ ಅವರು ಸಾವನ್ನಪ್ಪಿದರು.



ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅಮೃತ ದೇಸಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ನಾಲ್ವರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದ್ದು ಪೊಲೀಸರು ಇವರನ್ನು ಹುಡುಕುತ್ತಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಕೋಟೂರಿನಲ್ಲಿ ನೀರವ ಮೌನ ಆವರಿಸಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಕೂಡ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಚುನಾವಣೆ ಸಂದರ್ಭದಲ್ಲಿಯೇ ಈ ಹತ್ಯೆ ನಡೆದಿದ್ದು, ಯಾವುದೇ ಗಲಾಟೆಗಳು ಉಂಟಾಗದಂತೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಒದಗಿಸಲಾಗಿದೆ. ಹತ್ಯೆ ಆರೋಪಿಗಳ ಪತ್ತೆಗಾಗಿ ಜಾಲ ಬೀಸಲಾಗಿದ್ದು, ತಂಡವನ್ನು ಕೂಡ ರಚನೆ ಮಾಡಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ