LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ವ್ಯಕ್ತಿಗೆ ಚಾಕು ಇರಿತ

ಚಿಕ್ಕೋಡಿ : ಇತ್ತೀಚಿಗೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಕಾಗವಾಡ ಮತ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಪ್ರಶಾಂತ ಅಪರಾಜ್ ಅವರನ್ನು ಅಪರಿಚಿತರ ಗುಂಪೊಂದು ಚಾಕುವಿನಿಂದ ಇರಿದು ಪರಾರಿಯಾಗಿದೆ. ಅಪರಾಜ ಅವರನ್ನು ಕಾಗವಾಡ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.



ಸೋಮವಾರ ಸಂಜೆ ಅಪರಾಜ್ ಒಬ್ಬರೇ ಕಾಗವಾಡ ಶೇಡಬಾಳ ಮಧ್ಯೆ ಇದ್ದಾಗ ಬೈಕ್ ಗಳಲ್ಲಿ ಬಂದ ಗುಂಪು ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದೆ. ರಾಜಕೀಯ ಕಾರಣಕ್ಕಾಗಿಯೂ ಅಥವಾ ಯಾವ ಉದ್ದೇಶಕಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸ್ ವಿಚಾರಣೆಯಿಂದ ತಿಳಿದು ಬರಲಿದೆ.



ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಅವರ ಆಪ್ತರಾಗಿದ್ದ ಅಪರಾಜ್ ಅವರು ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಕಾಗವಾಡ ಯುವ ಘಟಕದ ಅಧ್ಯಕ್ಷರೆಂದು ಆಯ್ಕೆಯಾಗಿದ್ದು ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೀವ್ರವಾಗಿ ತೊಡಗಿಸಿಕೊಂಡಿದ್ದರು. ಚುನಾವಣೆ ಹತ್ತಿರ ಬಂದಿರುವದರಿಂದ ರಾಜಕೀಯ ಕಾರಣದಿಂದ ಅವರ ಮೇಲೆ ಹಲ್ಲೆಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.



ಅಪರಾಜ್ ಅವರ ಮೇಲಿನ ಹಲ್ಲೆ ಖಂಡಿಸಿ ಐಣಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿದೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST