LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿ ಪೊಲೀಸ ಗುಂಡಿಗೆ ಬಲಿ

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಇಂದು ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್‌ಕೌಂಟರ‌ನಲ್ಲಿ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.



ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ಬಂಧಿಸಲು ಹುಬ್ಬಳ್ಳಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶಕುಮಾರ ಎನ್ನಲಾಗಿದ್ದು, ಈತ ಇರುವ ಜಾಗ ಪತ್ತೆಯಾದ ನಂತರ ಆತನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಆದರೆ, ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದರಿಂದ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಈ ವೇಳೆ ಗುಂಡು ಆರೋಪಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.



ಕಾಲು ಮತ್ತು ಎದೆಯ ಭಾಗಕ್ಕೆ ಗುಂಡು‌ ತಗುಲಿದ್ದರಿಂದ ಆರೋಪಿ ಕುಸಿದುಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಒಯ್ಯಲಾಯಿತು. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.



ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಮೃತ ಆರೋಪಿ ಚಾಕಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶಕುಮಾರ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.



ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದರು. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಳು. ಈ ವೇಳೆ ಮಗು ಮನೆಯ ಹೊರೆಗೆ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸಿದ ಆರೋಪಿ ಚಾಕಲೇಟ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ.



ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದಾಗ ನಿರ್ಮಾಣ ಹಂತದ ಕಟ್ಟಡದ ಬಳಕೆಯಾಗದ ಶೌಚಾಲಯದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.



ಬಾಲಕಿಯ ಪೋಷಕರು ಕೊಪ್ಪಳದವರಾಗಿದ್ದು, ಪೇಂಟಿಂಗ್ ಕೆಲಸಕ್ಕಾಗಿ ಹುಬ್ಬಳ್ಳಿಗೆ ಬಂದಿದ್ದರು.



ಘಟನೆ ಖಂಡಿಸಿ ಅಶೋಕ ನಗರ ಪೊಲೀಸ್ ಠಾಣೆಯ ಮುಂದೆ ಸ್ಥಳೀಯರಿಂದ ಬೃಹತ್ ಪ್ರತಿಭಟನೆ ನಡೆದಿತ್ತು. ಇದರ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆತನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ, ಈ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ನಂತರ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದಾಗ ಗಂಭೀರವಾಗಿ ಗಾಯಗೊಂಡ ಆರೋಪಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ