LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತಾನು ನೋಡಿದ ವರನನ್ನು ನಿರಾಕರಿಸಿದ ಮಗಳನ್ನು ಕೊಂದ ತಾಯಿ

ಚೆನ್ನೈ: ಹೆತ್ತ ತಾಯಿ ಒಪ್ಪಿದ ವರನನ್ನು ಮದುವೆಯಾಗಲು ನಿರಾಕರಿಸಿದ 20 ವರ್ಷದ ಮಗಳನ್ನು ತಾಯಿಯೇ ಕತ್ತು ಹಿಸುಕಿ ಕೊಂದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.



ನರ್ಸ‌ ಆಗಿ ಕೆಲಸ ಮಾಡುತ್ತಿದ್ದ 20 ವರ್ಷದ ಪಿ. ಅರುಣಾ ಕುಟುಂಬದವರು ನೋಡಿ, ಒಪ್ಪಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.



ತಮ್ಮ ಸಮುದಾಯದವರನ್ನೇ ಮದುವೆಯಾಗಬೇಕೆಂದು ಅರುಣಾಗೆ ಒತ್ತಾಯ ಮಾಡಲಾಗಿತ್ತು. ಇದನ್ನು ನಿರಾಕರಿಸಿದ ಕಾರಣ ಬೇಸರಗೊಂಡ ತಾಯಿಯು ಮಗಳ ಕತ್ತು ಹಿಸುಕಿ ಕೊಂದಿದ್ದಾಳೆ.



ಪಿ ಅರುಣಾ ಅವರ ತಂದೆ ಮತ್ತು ಸಹೋದರ ಚೆನ್ನೈನಲ್ಲಿ ಆಟೋ ಡ್ರೈವರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಅತ್ಯಂತ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಸಂತ್ರಸ್ತೆ ಕೊಯಮತ್ತೂರಿನಲ್ಲಿ ನರ್ಸ ಆಗಿ ಕೆಲಸ ಮಾಡುತ್ತಿದ್ದು, ಆರು ತಿಂಗಳ ಹಿಂದೆ ಮನೆಗೆ ಮರಳಿದ್ದರು.



ಆಕೆಯ ತಾಯಿ ಆಯ್ಕೆ ಮಾಡಿದ ನಿರೀಕ್ಷಿತ ವರನ ಕುಟುಂಬ ನಿನ್ನೆ ಅವರನ್ನು ಭೇಟಿ ಮಾಡಬೇಕಿತ್ತು. ಆದರೆ ಅರುಣಾ ಅವರನ್ನು ಭೇಟಿಯಾಗಲು ಮತ್ತು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಳು. ಈ ವಿಚಾರವಾಗಿ ಇಬ್ಬರ ನಡುವೆ ನಡೆದ ತೀವ್ರ ವಾಗ್ವಾದ ಕೊಲೆಗೆ ಕಾರಣವಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ