LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ಅ. 23ರಿಂದ ಎಸ್‌ಐಆರ್‌ ವಿರುದ್ಧ ದೇಶವ್ಯಾಪಿ ಹೋರಾಟ

ಹೊಸದಿಲ್ಲಿ, ಅ. 15: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಅಕ್ಟೋಬರ್ 23ರಿಂದ ದೇಶಾದ್ಯಂತ ಜನಾಂದೋಲನ ಆರಂಭಿಸುವುದಾಗಿ ಘೋಷಿಸಿದೆ. ಎಸ್‌ಐಆರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಬೇಕು ಎಂದು ಒತ್ತಾಯಿಸಿದೆ.

ಚುನಾವಣೆ ನಡೆಯಲಿರುವ ರಾಜ್ಯಗಳಿಗೂ ಹೋರಾಟ ವಿಸ್ತರಿಸಲು ನಿರ್ಧರಿಸಿರುವ ಸಂಘಟನೆ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲಾಗಿದೆ ಎನ್ನಲಾದ ಪ್ರಕರಣಗಳ ಕುರಿತು ಪುರಾವೆಗಳನ್ನು ಸಂಗ್ರಹಿಸುವುದಾಗಿ ತಿಳಿಸಿದೆ.

ಅಕ್ಟೋಬರ್ 23ರಿಂದ ದೇಶವ್ಯಾಪಿ ಪ್ರತಿರೋಧ ಆರಂಭವಾಗಲಿದ್ದು, ರೈತರು, ದಲಿತರು, ವಿದ್ಯಾರ್ಥಿಗಳು ಹಾಗೂ ಯುವಜನರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಎಸ್‌ಐಆರ್‌ ಅಕ್ರಮಗಳಿಗೆ ಸಂಬಂಧಿಸಿದ ಪುರಾವೆಗಳನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಿಜೆಪಿ ಪ್ರಕಟಿಸಿದೆ.

ಅಕ್ಟೋಬರ್ 10ರಂದು ದಿಲ್ಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆಯನ್ನು ಪೊಲೀಸರು ತಡೆದ ಕೆಲವೇ ದಿನಗಳಲ್ಲಿ ದೇಶವ್ಯಾಪಿ ಹೋರಾಟದ ಘೋಷಣೆ ಹೊರಬಿದ್ದಿದೆ.

ಅಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸೇರಿದಂತೆ ಹಲವು ಮುಖಂಡರನ್ನು ಜಂತರ್ ಮಂತರ್ ತಲುಪುವ ಮೊದಲೇ ಪೊಲೀಸರು ವಶಕ್ಕೆ ಪಡೆದಿದ್ದರು. ದಿಲ್ಲಿಯಾದ್ಯಂತ ಸಾವಿರಾರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿತ್ತು. ಮಧ್ಯ ದಿಲ್ಲಿಯ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸಂಚಾರ ನಿರ್ಬಂಧಿಸಲಾಗಿತ್ತು. ಸಾರ್ವಜನಿಕ ಸಾರಿಗೆ ಹಾಗೂ ಇಂಟರ್ನೆಟ್ ಸೇವೆಗಳ ಮೇಲೂ ನಿರ್ಬಂಧ ಹೇರಲಾಗಿತ್ತು ಎಂದು ವರದಿಯಾಗಿದೆ.

ಜಂತರ್ ಮಂತರ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರಿಂದ ಪ್ರತಿಭಟನಾಕಾರರು ಕನ್ನಾಟ್ ಪ್ಲೇಸ್, ದಿಲ್ಲಿ ಹಾತ್ ಹಾಗೂ ರಾಜ್ ಘಾಟ್ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಿದ್ದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ಆರೋಪ ಹೋರಾಟದ ಪ್ರಮುಖ ಕಾರಣವಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕೈಗೊಂಡ ಕೆಲವು ನಿರ್ಧಾರಗಳಿಗೆ ಇತರ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ತನಿಖಾ ವರದಿ ಉಲ್ಲೇಖಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST