LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಉದ್ಘಾಟನೆಯಾದ 17 ದಿನದಲ್ಲೇ ಕೊಚ್ಚಿಹೋದ ಹೊಸ ರಸ್ತೆ

ಡೆಹ್ರಾಡೂನ್, ಜುಲೈ 28: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೇವಲ 17 ದಿನಗಳ ಹಿಂದೆ ಉದ್ಘಾಟನೆಯಾಗಿದ್ದ ಡೆಹ್ರಾಡೂನ್‌ನ ಸೇತುವೆಯನ್ನು ಸಂಪರ್ಕಿಸುವ ರಸ್ತೆ ಕುಸಿದಿದೆ. ಟನ್ಸ್ ನದಿಗೆ ಅಡ್ಡಲಾಗಿ ಪ್ರೇಮ್‌ನಗರದ ನಂದ್ ಕಿ ಚೌಕಿ ಬಳಿ ಸುಮಾರು ₹16 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಈ ಸಂಪರ್ಕ ರಸ್ತೆ ಹಾನಿಗೊಳಗಾಗಿದ್ದು, ಡೆಹ್ರಾಡೂನ್–ಪವೋಂತಾ ಸಾಹಿಬ್ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಕಳೆದ ವರ್ಷದ ಮಳೆಯಲ್ಲಿ ಕೊಚ್ಚಿಹೋಗಿದ್ದ ರಸ್ತೆಗೆ ಬದಲಿಯಾಗಿ ನಿರ್ಮಿಸಲಾದ ಈ ಸಂಪರ್ಕ ರಸ್ತೆಯನ್ನು ಜುಲೈ 12ರಂದು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಸೇತುವೆಗೆ ಯಾವುದೇ ಹಾನಿಯಾಗಿಲ್ಲ. ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಭಾಗ ಮಾತ್ರ ಕುಸಿದಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ 24 ಗಂಟೆಯ ನಿಯಂತ್ರಣ ಕೊಠಡಿಗಳನ್ನು ಸಕ್ರಿಯಗೊಳಿಸಲಾಗಿದ್ದು, ದುರಸ್ತಿ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆಶಿಶ್ ಚೌಹಾಣ್ ತಿಳಿಸಿದ್ದಾರೆ.

"ಸೇತುವೆ ಸುರಕ್ಷಿತವಾಗಿದೆ. ಸಂಪರ್ಕ ರಸ್ತೆಯ ಹಾನಿಗೊಳಗಾದ ಭಾಗವನ್ನು ಶೀಘ್ರದಲ್ಲೇ ಮರುನಿರ್ಮಿಸಿ ಸಂಚಾರ ಪುನಃ ಆರಂಭಿಸಲಾಗುವುದು" ಎಂದು ಅವರು ಹೇಳಿದ್ದಾರೆ.

ಈ ಘಟನೆ ಡೆಹ್ರಾಡೂನ್, ವಿಕಾಸ್‌ನಗರ ಹಾಗೂ ನೆರೆಯ ಹಿಮಾಚಲ ಪ್ರದೇಶದ ನಡುವಿನ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟುಮಾಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ