LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಯಿಸಿ ಪೊಲೀಸ ಪೇದೆಯ ಕೊಲೆ

ಕಲಬುರಗಿ : ಅಕ್ರಮ ಮರಳುಗಾರಿಕೆಗೆ ಛತ್ತೀಸಗಡ ಮೂಲದ ಮೂವರು ಕಾರ್ಮಿಕರು ರಾಯಚೂರಿನಲ್ಲಿ ಬಲಿಯಾದ ಘಟನೆ ಇನ್ನೂ ಹಸಿರಿರುವಾಗಲೇ ಅಂತಹದೇ ಘಟನೆ ನೆರೆಯ ಕಲಬುರಗಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಯತ್ನಿಸಿದ ಪೊಲೀಸ್ ಕಾನ್ಸಟೇಬಲ್ ಮೇಲೆಯೇ ಟ್ರ್ಯಾಕ್ಟರ್ ಹಾಯಿಸಿ ಕೊಲೆ ಮಾಡಲಾಗಿದೆ.



ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪೂರ ಬಳಿ ಅಕ್ರಮ ಮರಳು ಸಾಗಾಣಿಕೆಗೆ ನೆಲೋಗಿ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಮಯೂರ (50) ಬಲಿಯಾಗಿದ್ದಾರೆ.



ಅಕ್ರಮ ಮರಳು ಸಾಗಣಿಕೆ ತಡೆಯಲು ಮಯೂರ ಅವರನ್ನು ನಿಯೋಜಿಸಲಾಗಿತ್ತು. ಕೃಷ್ಣಾ ನದಿಯಿಂದ ಮರಳನ್ನು ಯಾವುದೇ ಅನುಮತಿಯಿಲ್ಲದೇ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಯತ್ನಿಸಿದ್ದಾರೆ. ಆದರೆ ಚಾಲಕ ಅವರಿಗೆ ಡಿಕ್ಕಿ ಹೊಡೆಸಿ ವಾಹನದ ಸಮೇತ ಪರಾರಿಯಾಗಿದ್ದಾನೆ.

ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ