LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಠಾತ್ ಕುಸಿದು ಸಾವನ್ನಪ್ಪಿದ ಯುವತಿ

ಉಡುಪಿ, ೨೫- ಕ್ರೈಸ್ತ ಸಮುದಾಯದಲ್ಲಿ ಮದುವೆಗೂ ಮುನ್ನ ನಡೆಯುವ ರೋಸ್ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಯುವತಿಯೊಬ್ಬರು ಹಠಾತ್ ಕುಸಿದು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.



ಕೊಳಲಗಿರಿ ಹಾವಂಜಿಯಲ್ಲಿ ನಡೆಯುತ್ತಿದ್ದ ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದ 23 ವರ್ಷದ ಜೋತ್ಸ್ನಾ ಮರಿಯಾ ಕೋತಾ ಸಾವನ್ನಪ್ಪಿದವರಾಗಿದ್ದಾರೆ.



ಸಮಾರಂಭದಲ್ಲಿ ಲವಲವಿಕೆಯಿಂದ ಪಾಲ್ಗೊಂಡಿದ್ದ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಉಡುಪಿಯ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರದಂದು ಮೃತಪಟ್ಟಿದ್ದಾರೆ.



ಇತ್ತೀಚಿನ ದಿನಗಳಲ್ಲಿ ಆರೋಗ್ಯವಂತರಾಗಿರುವ ಯುವ ಜನತೆಯೇ ಈ ರೀತಿ ಹಠಾತ್ ಸಾವಿಗೀಡಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈಗ ಈ ಕುರಿತು ಚರ್ಚೆ ನಡೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ