LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ಅಭಿಜಿತ ದೀಪ್ಕೆ, ನೇಹಾ ಬೋರಾ ಪೊಲೀಸರ ವಶಕ್ಕೆ

ಹೊಸದಿಲ್ಲಿ, ಅ. 16: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ತಿರಂಗಾ ಯಾತ್ರೆ’ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ ದೀಪ್ಕೆ ಹಾಗೂ ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಅಭಿಜಿತ ದೀಪ್ಕೆ ಅವರಿಗೆ ಪೊಲೀಸರು ಮೊದಲೇ ನೋಟಿಸ್ ನೀಡಿದ್ದರು. ಆದರೂ ಪ್ರತಿಭಟನೆ ನಡೆಸುವ ನಿರ್ಧಾರದಿಂದ ಹಿಂದೆ ಸರಿಯದ ಅವರು, ಸರ್ಕಾರದಿಂದ ಉತ್ತರದಾಯಿತ್ವ ಕೇಳುವುದು ಅರಾಜಕತೆಯಲ್ಲ. ಅಗತ್ಯವಿದ್ದರೆ ಜೈಲಿಗೂ ಹೋಗಲು ಸಿದ್ಧ ಎಂದು ಘೋಷಿಸಿದ್ದರು.

ಶಾಂತಿಯುತ ಪ್ರತಿಭಟನೆಗಳಿಂದ ಉದ್ಯಮಗಳಿಗೆ ನಷ್ಟವಾಗುವುದಿಲ್ಲ. ಆದರೆ ಸರ್ಕಾರವೇ ಇಡೀ ನಗರವನ್ನು ಬಂದ್ ಮಾಡಿ, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿ, ನಾಗರಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಿದಾಗ ವ್ಯಾಪಾರ ವಹಿವಾಟುಗಳಿಗೆ ಹೊಡೆತ ಬೀಳುತ್ತದೆ ಎಂದು ದೀಪ್ಕೆ ಆರೋಪಿಸಿದರು.

ಸಿಜೆಪಿ ನಾಯಕನಿಗೆ ಪೊಲೀಸ್ ನೋಟಿಸ್ ನೀಡಿರುವುದನ್ನು ಎನ್‌ಸಿಪಿ (ಎಸ್‌ಪಿ) ವಕ್ತಾರ ಅನೀಶ್ ಗ್ವಾಂಡೆ ಖಂಡಿಸಿದ್ದಾರೆ. ‘ಹರ್ ಘರ್ ತಿರಂಗಾ’ ಅಭಿಯಾನದ ಬಗ್ಗೆ ಮಾತನಾಡುವವರು ‘ತಿರಂಗಾ ಯಾತ್ರೆ’ಗೆ ಹೆದರಬೇಕಾಗಿಲ್ಲ. ಶಾಂತಿಯುತವಾಗಿ ರಾಷ್ಟ್ರಧ್ವಜ ಹಿಡಿದು ಮೆರವಣಿಗೆ ನಡೆಸಲು ಅವಕಾಶ ನಿರಾಕರಿಸಿದರೆ ಅದು ಸರ್ಕಾರದ ಧೈರ್ಯದ ಕೊರತೆಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಪ್ರತಿಭಟನೆಯನ್ನು ತಡೆಯಲು ಪೊಲೀಸರು ಕೈಗೊಂಡ ಕ್ರಮಗಳಿಗೆ ವಿವಿಧ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ನಾಗರಿಕರ ಹಕ್ಕು ಎಂದು ಪ್ರತಿಪಾದಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST