LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿವಾಹಿತೆಯೊಂದಿಗೆ ಪರಾರಿ: ಮನೆ ಧ್ವಂಸ ಪ್ರಕರಣದಲ್ಲಿ 3 ಪ್ರಮುಖ ಆರೋಪಿಗಳ ಬಂಧನ

ಬೆಳಗಾವಿ, ಜೂ. 30: ವಿವಾಹಿತೆಯೊಬ್ಬಳು ಯುವಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಯುವಕನ ಮನೆ ಮೇಲೆ ದಾಳಿ ನಡೆಸಿ ಮನೆ ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ವಿವಾಹಿತೆ ನಾಗವ್ವ ಯಲ್ಲಪ್ಪ ನಾಯಕನೊಂದಿಗೆ ಪರಾರಿಯಾಗಿದ್ದಾಳೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಹಾಗೂ ಪತಿಯ ಕಡೆಯ ಸಂಬಂಧಿಕರು ಯಲ್ಲಪ್ಪನ ಮನೆ ಮೇಲೆ ದಾಳಿ ನಡೆಸಿದ್ದರು. ನೂರಾರು ಜನರ ಗುಂಪು ಮನೆಯಲ್ಲಿ ನುಗ್ಗಿ ಹಂಚುಗಳು, ಅಲ್ಮಾರಿ, ಟಿವಿ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ಧ್ವಂಸಗೊಳಿಸಿದ್ದಲ್ಲದೆ, ಚಿನ್ನಾಭರಣ, ನಗದು ಹಾಗೂ ಕುರಿಗಳನ್ನು ದೋಚಿಕೊಂಡು ಹೋಗಿರುವ ಆರೋಪವೂ ಕೇಳಿಬಂದಿತ್ತು.

ಈ ಸಂಬಂಧ ಯಲ್ಲಪ್ಪನ ತಂದೆ ನೀಡಿದ ದೂರಿನ ಮೇರೆಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ನಾಗರಾಜ ನಾಯಕ, ರವಿ ಬೀಜಗತ್ತಿ, ಈಶ್ವರ ಮುಚ್ಚಂಡಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ತನಿಖೆ ಆರಂಭಿಸಿದ ಮಾರಿಹಾಳ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಗಳಾದ ನಾಗರಾಜ ನಾಯಕ, ರವಿ ಬೀಜಗತ್ತಿ ಹಾಗೂ ಈಶ್ವರ ಮುಚ್ಚಂಡಿ ಅವರನ್ನು ಬಂಧಿಸಿದ್ದಾರೆ.

ಬಂಧಿತ ಮೂವರು ಆರೋಪಿಗಳು ನಾಗವ್ವ ಹಾಗೂ ಆಕೆಯ ಪತಿ ಬಸಪ್ಪ ಅವರ ಸಂಬಂಧಿಕರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆ ಮತ್ತು ಬಂಧನಕ್ಕಾಗಿ ಪೊಲೀಸ್ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ ಫಲಿತಾಂಶ: ಹೊಸ ದಾಖಲೆ ಬರೆದ ವಿಟಿಯುಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಉಪವಾಸ: ಹದಗೆಟ್ಟ ಸೋನಮ್ ವಾಂಗ್‌ಚುಕ್ ಆರೋಗ್ಯ ಭಾರತದ 31ನೇ ಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ ಸೇಠ ಅಧಿಕಾರ ಸ್ವೀಕಾರಪಿಎಂ-ಕಿಸಾನ್ ಕಂತು: 1 ಪೈಸೆ ಜಮೆ!ಸೈನಿಕರ ಸಾವಿನ ಬಗ್ಗೆ ಸಂಸತ್ ಗೆ ತಪ್ಪು ಮಾಹಿತಿ : ರಕ್ಷಣಾ ಸಚಿವ ರಾಜನಾಥ ಸಿಂಗ್ ವಿರುದ್ಧ ಹಕ್ಕುಚ್ಯುತಿ ನೋಟಿಸ್126 ವರ್ಷಗಳಲ್ಲೇ ಮೂರನೇ ಅತಿ ಕಳಪೆ ಮುಂಗಾರು!3 ವರ್ಷದ ಕಂದಮ್ಮನ ಮೇಲೆ ಲೈಂಗಿಕ ಕೃತ್ಯ, ಕೊಲೆ: 65 ವರ್ಷದ ಅಪರಾಧಿಗೆ ಗಲ್ಲುಶಿಕ್ಷೆರಾಜ್ಯದಲ್ಲೆಡೆ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆಗೆ ಹೊಸ ವ್ಯವಸ್ಥೆವಿವಾಹಿತೆಯೊಂದಿಗೆ ಪರಾರಿ: ಮನೆ ಧ್ವಂಸ ಪ್ರಕರಣದಲ್ಲಿ 3 ಪ್ರಮುಖ ಆರೋಪಿಗಳ ಬಂಧನವಿವಾಹಿತೆಯೊಂದಿಗೆ ಪರಾರಿಯಾದ ಯುವಕನ ಮನೆ ಮೇಲೆ ದಾಳಿ; ಮನೆ ಧ್ವಂಸ, ಚಿನ್ನಾಭರಣ, 25 ಕುರಿ ದೋಚಿದ ಆರೋಪ