ನಿಪ್ಪಾಣಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಸಮೀಪದ ಸ್ಥವನಿಧಿ ಘಾಟ್ನಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪೊಲೀಸ್ ಹೆಡ್ಕಾನ್ಸ್ಟೇಬಲ್ ಹಾಗೂ ಅವರ ಪುತ್ರಿ ಮೃತಪಟ್ಟಿದ್ದಾರೆ.
ಮೃತರನ್ನು ಪುಂಡಲೀಕ ಹಟ್ಟಿ (50) ಹಾಗೂ ಅವರ ಪುತ್ರಿ ನಿಖಿತಾ ಹಟ್ಟಿ (24) ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಇಬ್ಬರೂ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ವೇಗತಡೆ ಬಳಿ ಪುಂಡಲೀಕ ಬ್ರೇಕ್ ಹಾಕಿದ್ದಾರೆ. ಹಿಂದಿನಿಂದ ಬರುತ್ತಿದ್ದ ಲಾರಿ ಚಾಲಕ ಸಮಯಕ್ಕೆ ಸರಿಯಾಗಿ ವಾಹನ ನಿಲ್ಲಿಸಲು ಸಾಧ್ಯವಾಗದೆ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ರಭಸಕ್ಕೆ ತಂದೆ, ಮಗಳು ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.