LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಖಾತೆ ಹಂಚಿಕೆ ಕಿಡಿ ; ಬೈರೇಗೌಡ ದಿಲ್ಲಿಗೆ

ಬೆಂಗಳೂರು, ಜೂ. 9 : ಕಾಂಗ್ರೆಸ್ ಸರಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಉಂಟಾಗಿದ್ದ ಅಸಮಾಧಾನ ಶಮನಗೊಂಡಿದೆ ಎನ್ನುವಷ್ಟರಲ್ಲೇ ಹೊಸ ಬೆಳವಣಿಗೆಯೊಂದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಖಾತೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಪ್ರಸ್ತುತ ರೂಪದಲ್ಲಿ ಸ್ವೀಕರಿಸಲು ಅವರು ನಿರಾಕರಿಸಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರವನ್ನು ತಮ್ಮ ಇಲಾಖೆಯ ವ್ಯಾಪ್ತಿಗೆ ಸೇರಿಸಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಈ ಕುರಿತು ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಕಾಂಗ್ರೆಸ್ ನಾಯಕ ರಣದೀಪ ಸಿಂಗ್ ಸುರ್ಜೇವಾಲ ಅವರ ಗಮನಕ್ಕೂ ವಿಷಯವನ್ನು ತಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈವರೆಗೆ ಯಾವುದೇ ಸ್ಪಷ್ಟ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ದಿಲ್ಲಿಯತ್ತ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದಿಲ್ಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಕೆ.ಸಿ.ವೇಣುಗೋಪಾಲ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಾಗೂ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕೆಲ ಹಿರಿಯ ಸಚಿವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಎಚ್‌.ಮುನಿಯಪ್ಪ ಅವರಿಗೆ ಹಂಚಿಕೆ ಮಾಡಲಾದ ಖಾತೆಗಳ ಕುರಿತು ಅಸಮಾಧಾನ ಹೊರಹಾಕಿದ್ದರು.

ಬಳಿಕ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಅಸಮಾಧಾನಗೊಂಡ ಸಚಿವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಕೃಷ್ಣ ಬೈರೇಗೌಡ ಅವರ ಖಾತೆ ಸಂಬಂಧದ ಅಸಮಾಧಾನ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ