LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಡಿಯೋ ಚಾಟಿಂಗ್ ವೇಳೆ ಮಹಿಳೆಯ ಅಶ್ಲೀಲ ವಿಡಿಯೋ ರೆಕಾರ್ಡ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಯ ಬಂಧನ

ಶಿವಮೊಗ್ಗ: ವಿಡಿಯೋ ಚಾಟಿಂಗ್ ವೇಳೆ ಮಹಿಳೆಯ ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ.



ಬಿಹಾರ ರಾಜ್ಯದ ಬೈಸಾ ಪೂರ್ಣಿಯಾ ಜಿಲ್ಲೆ ಸಾದಿಪುರ ಚೋಪ್ರಾದ ಚಕ್ಲ ಗ್ರಾಮದ ರೋಜರ್ ರಜಾ(22) ಬಂಧಿತ ಆರೋಪಿ.



ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಮಹಿಳೆಯೊಬ್ಬರಿಗೆ ಆಪ್ ವೊಂದರಲ್ಲಿ ರೋಜರ್ ರಜಾ ಪರಿಚಯವಾಗಿದ್ದು, ನಂತರ ಇಬ್ಬರೂ ವಾಟ್ಸಪ್ ಮುಖಾಂತರ ವಿಡಿಯೋ ಮತ್ತು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ನಂತರದಲ್ಲಿ ಆಕೆಗೆ ಬೆದರಿಕೆ ಹಾಕಿ ಆಕೆಯ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಸ್ಕ್ರೀನ್ ರೆಕಾರ್ಡ ಮಾಡಿಕೊಂಡು 1 ಲಕ್ಷ ರೂ. ಕೊಡಬೇಕು, ಇಲ್ಲವಾದರೆ ಈ ಫೋಟೋ ಮತ್ತು ವಿಡಿಯೋಗಳನ್ನು ನಿಮ್ಮ ಮನೆಯವರಿಗೆ ಕಳಿಸುತ್ತೇನೆಂದು ಎಂದು ಹೆದರಿಸಿ ಮಾನಸಿಕ ಹಿಂಸೆ ನೀಡಿದ ಬಗ್ಗೆ ಶಿರಾಳಕೊಪ್ಪ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.



ಪ್ರಕರಣದ ತನಿಖೆ ಕೈಗೊಂಡ ಸಿಪಿಐ ಶಿಕಾರಿಪುರ ಟೌನ್ ವೃತ್ತ ಮತ್ತು ಪಿಎಸ್ಐ ಶಿರಾಳಕೊಪ್ಪ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ನ. 24 ರಂದು ಆರೋಪಿ ರೋಜರ್ ರಜಾನನ್ನು ಆತನ ಸ್ವಂತ ಗ್ರಾಮವಾದ ಬಿಹಾರ ರಾಜ್ಯದ ಚಕ್ಲಾ ಗ್ರಾಮದಲ್ಲಿ  ಬಂಧಿಸಿದೆ.



ಆರೋಪಿತನನ್ನು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿ ಕೃತ್ಯಕ್ಕೆ ಬಳಸಲಾದ ಮೊಬೈಲ್ ಫೋನ್ ಅಮಾನತ್ತುಪಡಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಿವಮೊಗ್ಗ ಪೊಲೀಸ್ ಅಧೀಕ್ಷಕರು ತನಿಖಾ ತಂಡದ ಉತ್ತಮ ಕಾರ್ಯವನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು