LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಕಲಿ ಅಂಕಪಟ್ಟಿ ನೀಡಿ ಮುಂಬಡ್ತಿ : ತಾಲೂಕು ಪಂಚಾಯತಿ ಎಡಿ ಬಂಧನ

ವಿಜಯನಗರ: ಮುಂಬಡ್ತಿಗಾಗಿ ಪದವಿಯ ನಕಲಿ ಅಂಕಪಟ್ಟಿ ಮತ್ತು ಮೈಗ್ರೇಶನ್ ಪ್ರಮಾಣ ಪತ್ರಗಳನ್ನು ನೀಡಿದ್ದಾರೆ ಎಂಬ ಗಂಭೀರ ಆರೋಪದಡಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಪಂಚಾಯತಿ ನರೇಗಾ ಸಹಾಯಕ ನಿರ್ದೇಶಕ ಉಮೇಶ ಗೌಡ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಅವರನ್ನು ಬಂಧಿಸಿದ್ದಾರೆ.



ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಪರವಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶೈಲಾ ಎಸ್.ಕುಲಕರ್ಣಿ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.



ಈ ಹಿಂದೆ ಹಗರಿಬೊಮ್ಮನಹಳ್ಳಿ ತಾಲೂಕು ಪಂಚಾಯಿತಿನಲ್ಲಿ ಅನುಕಂಪದ ಆಧಾರದಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಕೆಲಸ ಪಡೆದ ಉಮೇಶ್ ಗೌಡ, ಮುಂಬಡ್ತಿ ಪಡೆಯುವ ದುರುದ್ದೇಶದಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಹೆಸರಲ್ಲಿ 2007, 2008 ಮತ್ತು 2009ನೇ ಸಾಲಿನ ಬಿಎ ಪದವಿಯ ನಕಲಿ ಅಂಕಪಟ್ಟಿ, ಪಾಸಿಂಗ್ ಸರ್ಟಿಫಿಕೆಟ್, ಮೈಗ್ರೇಶನ್ ಸೃಷ್ಟಿ ಮಾಡಿಕೊಂಡು ಕಾರ್ಯನಿರ್ವಾಹಕ ಅಧಿಕಾರಿ ಅವರಿಂದ ದೃಢೀಕರಿಸಿಕೊಂಡು ಮುಂಬಡ್ತಿ ಪಡೆದುಕೊಂಡಿದ್ದಾರೆ.



ಹೀಗಾಗಿ ಹಗರಿಬೊಮ್ಮಹಳ್ಳಿ ತಾಲೂಕು ಪಂಚಾಯ್ತಿಯಲ್ಲಿ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಉಮೇಶ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ