LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದೂರು ನೀಡಿದ್ದಕ್ಕೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮತ್ತೆ ಬಾಲಕಿ ಮೇಲೆ ಅತ್ಯಾಚಾರ!

ಗದಗ, ಮೇ 26 : ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಬಾಲಕಿಯ ಮೇಲೆಯೇ ಮತ್ತೆ ಅತ್ಯಾಚಾರ ಎಸಗಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶನಿವಾರ ಬೆಳಕಿಗೆ ಬಂದಿದೆ.

17 ವರ್ಷದ ಬಾಲಕಿ ಕಂಪ್ಯೂಟರ್ ತರಗತಿಗೆ ತೆರಳುತ್ತಿದ್ದ ವೇಳೆ ಆರೋಪಿ ಅಲ್ಲಾಬಕ್ಷ ಕೊಪ್ಪದ ಆಕೆಯನ್ನು ಸಂಪರ್ಕಿಸಿ ಮಾತುಕತೆಯ ಮೂಲಕ ಮನವೊಲಿಸಿದ್ದಾನೆ ಎನ್ನಲಾಗಿದೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.

ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ಬಳಿಕ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿ ಅಲ್ಲಾಬಕ್ಷ ಕೊಪ್ಪದ ವಿರುದ್ಧ ಈ ಹಿಂದೆಯೂ ಇದೇ ಬಾಲಕಿ ನೀಡಿದ ದೂರಿನ ಆಧಾರದಲ್ಲಿ 2025ರಲ್ಲಿ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನಂತರ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.

ಜೈಲಿನಿಂದ ಹೊರಬಂದ ಬಳಿಕ ತನ್ನ ವಿರುದ್ಧ ದೂರು ನೀಡಿ ಜೈಲು ಸೇರಿಸಿದ್ದಕ್ಕೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಆರೋಪಿ ಮತ್ತೆ ಅದೇ ಬಾಲಕಿಯನ್ನು ಗುರಿಯಾಗಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST