LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೀಸಲಾತಿಗಾಗಿ ಹಗ್ಗ ಜಗ್ಗಾಟ; ೫೦ ಸೀಟು ಗೆದ್ದ ನಂತರ ಒಕ್ಕಲಿಗ ಮೀಸಲಾತಿ ಹೆಚ್ಚಳದ ವಿಚಾರ ಎಂದ ಯತ್ನಾಳ

ಬೆಳಗಾವಿ:  ಮೀಸಲಾತಿಗಾಗಿ ರಾಜ್ಯದ ಪ್ರಬಲ ಜಾತಿಗಳಾದ ಲಿಂಗಾಯತ ಮತ್ತು ಒಕ್ಕಲಿಗ ನಾಯಕರ ನಡುವೆ ಹಗ್ಗ ಜಗ್ಗಾಟ ನಡೆದಿದೆ.



ಒಕ್ಕಲಿಗರಿಗೂ ಮೀಸಲಾತಿ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿಯ ಒಕ್ಕಲಿಗ ಸಚಿವರು ಮತ್ತು ಶಾಸಕರು ಮನವಿ ಮಾಡಿರುವ ವಿಚಾರವಾಗಿ ಬೆಳಗಾವಿಯಲ್ಲಿ ಪ್ರತಿಕ್ರಯಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಆರ್. ಅಶೋಕ ಕೂಡ ಬಿಜೆಪಿಗೆ 50 ಸೀಟು ಗೆಲ್ಲಿಸಿಕೊಂಡು ಬರಲಿ. ಆಮೇಲೆ ಮೀಸಲಾತಿ ಕೊಡೋಣ ಎಂದಿದ್ದಾರೆ.



ನಾವು ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತರು ಬಿಜೆಪಿಗೆ ಐವತ್ತು ಸ್ಥಾನ ಗೆದ್ದು ಕೊಡುತ್ತಿದ್ದೇವೆ. ದೇವೇಗೌಡರ ತರಹ ಅಶೋಕ ಕೂಡ ಸೀಟು ಗೆದ್ದು ತರಲಿ, ಆವಾಗ ವಿಚಾರ ಮಾಡೋಣ ಎಂದು ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು.



ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನಾದರೂ ಕೊಡಿ, ಎಬಿಸಿಝೆಡ್ ಆದರೂ ಕೊಡಿ. ಆದರೆ 2ಎಗೆ ಇರುವ ಸೌಲಭ್ಯ ಇರಬೇಕು ಎಂದು ಯತ್ನಾಳ ಆಗ್ರಹಿಸಿದರು.





ಬಡವರಿಗಾಗಿ ಮಾತ್ರ ನಾವು ಮೀಸಲಾತಿ ಕೇಳುತ್ತಿದ್ದೇವೆ ಇದ್ದೇವೆ. ನನ್ನ ಹಾಗೆ ಶಾಸಕ ಆದವರಿಗೆ, ಡಿಸಿ ಆದವರಿಗೆ, ಶ್ರೀಮಂತರಿಗೆ ಈ ಮೀಸಲಾತಿ ಬೇಡ. ನಾವು ರಾಜಕೀಯಕ್ಕಾಗಿ ಮೀಸಲಾತಿ ಕೇಳುತ್ತಿಲ್ಲ, ನನಗೆ ಅದರ ಅಗತ್ಯ ಇಲ್ಲ. ನಾನು ಹೇಗಾದರೂ ಗೆಲ್ಲುತ್ತೇನೆ. ಆದರೆ ಬಡವರಿಗಾಗಿ ಮೀಸಲಾತಿ ಕೊಡಿ ಎಂದು ಹೇಳಿದರು.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ