LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಶಹಾಪುರ ರವೀಂದ್ರ ಕೌಶಿಕ್ ಗ್ರಂಥಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡ ವಾಯುದಳದ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು

ಬೆಳಗಾವಿ : ಇಲ್ಲಿನ ಶಹಾಪುರದಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ರವೀಂದ್ರ ಕೌಶಿಕ್ ಈ ಗ್ರಂಥಾಲಯಕ್ಕೆ ಸಾಂಬ್ರಾದ ಭಾರತೀಯ ವಾಯುದಳದ ಏರ್ ಮನ್ ಟ್ರೇನಿಂಗ್ ಸ್ಕೂಲಿನ ಅಧಿಕಾರಿಗಳಾದ ಎಸ್ ಅಭಿಷೇಕ್ ಬಚ್ಚನ್, ಟಿ. ಎಸ್.ಸಾಧು ಹಾಗೂ ಅಮಿತಕುಮಾರ್ ಸೇರಿದಂತೆ 40 ಪ್ರಶಿಕ್ಷಣಾರ್ಥಿಗಳನ್ನೊಳಗೊಂಡ್ ತಂಡ ಗ್ರಂಥಾಲಯಕ್ಕೆ ಶೈಕ್ಷಣಿಕ ಭೇಟಿ ನೀಡಿ ಮಾಹಿತಿ ಪಡೆದರು.



ಅವರ ತರಬೇತಿಯ ಭಾಗವಾಗಿ ಗ್ರಂಥಾಲಯಗಳ ನಿರ್ವಹಣೆ,ಗ್ರಂಥಾಲಯದಲ್ಲಿ ನೀಡುತ್ತಿರುವ ಸೇವೆಗಳು, ಡಿಜಿಟಲ್ ಗ್ರಂಥಾಲಯ ಹಾಗೂ ಚಿಕ್ಕ ಮಕ್ಕಳ ಗ್ರಂಥಾಲಯದ ಬಗ್ಗೆ ತಿಳಿದುಕೊಂಡರು. ಗ್ರಂಥಾಲಯ ನಿರ್ವಹಣೆ ಹಾಗೂ ನೀಡುತ್ತಿರುವ ಸೇವೆಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗ್ರಂಥಪಾಲಕ ನಾಗನಗೌಡ ಪಾಟೀಲ, ಅವರು ಗ್ರಂಥಾಲಯ ನಿರ್ವಹಣೆ, ಸೇವೆಗಳು ಹಾಗೂ ಗ್ರಂಥಾಲಯದ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.



ಮನಿಷಾ ಕಾಂಬಳೆ ಅವರು ಡಿಜಿಟಲ್ ಗ್ರಂಥಾಲಯದ ಬಗ್ಗೆ ವಿವರಣೆ ನೀಡಿದರು. ಅಶ್ವಿನಿ ಹಾಗೂ ಸ್ಮಿತಾ ದೇಸಾಯಿ ಹಾಗೂ ಮಂಜುನಾಥ ಉಪಸ್ಥಿತರಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ