LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ

ವಿಜಯಪುರ: ವಿಮಾನ ನಿಲ್ದಾಣದ ಕಾಮಗಾರಿ ಭರದಿಂದ ಸಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಂಡು ವಿಜಯಪುರ ಜನತೆ ವಿಮಾನದಲ್ಲಿ ಸಂಚರಿಸುವ ಅವಕಾಶ ಲಭ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ವಿಶ್ವಾಸ ವ್ಯಕ್ತಪಡಿಸಿದರು.



ನಗರದ ಹೊರವಲಯದ ಬುರಾಣಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಬುಧವಾರ ನಡೆಸಿದ ಬಳಿಕ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣವನ್ನು ಎಟಿಆರ್ 72 ದಿಂದ ಏರ್‌ಬಸ್ 320 ವಿಮಾನಗಳ ಹಾರಾಟಕ್ಕಾಗಿ ಅನುಕೂಲವಾಗುವಂತೆ ಹೆಚ್ಚುವರಿಯಾಗಿ 127.29 ಕೋಟಿ ಹೆಚ್ಚುವರಿ ಅನುದಾನದ ಕಾಮಗಾರಿಗೆ ಸರ್ಕಾರದಿಂದ ಈಗಾಗಲೇ ಆಡಳಿತಾತ್ಮಕ ಅನುಮೋದನೆ ದೊರಕಿದೆ. ಈ ಎಲ್ಲ ತಾಂತ್ರಿಕ ಹಾಗೂ ಭೌತಿಕ ಕಾಮಗಾರಿಗಳು ಶೀಘ್ರದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.



ವಿಜಯಪುರ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ದೊಡ್ಡ ಉತ್ತೇಜನ ದೊರಕಲಿದ್ದು, ಕೂಡಲ ಸಂಗಮ, ಆಲಮಟ್ಟಿ, ಕೊಲ್ಲಾಪೂರ, ಸೊಲ್ಲಾಪೂರ ಹೀಗೆ ಪ್ರಸಿದ್ಧ ತಾಣಗಳಿಗೆ ಹೋಗಲು ಈ ವಿಮಾನ ನಿಲ್ದಾಣ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದರು.



ಇನ್ನು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾತನಾಡಿ, ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟಕ್ಕಾಗಿ 220 ಕೋಟಿ ಮಂಜೂರಾಗಿದ್ದು, ಎರಡು ಹಂತದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ