LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅನಾರೋಗ್ಯದ ಹಿನ್ನೆಲೆ ಕೆಎಲ್‌ಇ ಆಸ್ಪತ್ರೆ ಉದ್ಘಾಟನೆಗೆ ಅಮಿತ ಶಾ ಗೈರು

ಹುಬ್ಬಳ್ಳಿ, ಸೆ. 19 : ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಗಬ್ಬೂರು ಕ್ರಾಸ್ ಬಳಿ ನಿರ್ಮಾಣಗೊಂಡಿರುವ ಕೆಎಲ್‌ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಕಾಹೇರ್) ಜೆಜಿಎಂಎಂ ವೈದ್ಯಕೀಯ ಕಾಲೇಜು ಕಟ್ಟಡ, ಕೆಎಲ್‌ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶುಕ್ರವಾರ ರಾತ್ರಿಯೇ ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ ಶಾ, ನಗರದ ಡೆನಿಸನ್ಸ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಬೆಳಿಗ್ಗೆ 11.30ಕ್ಕೆ ಅವರಿಂದಲೇ ಆಸ್ಪತ್ರೆ ಉದ್ಘಾಟನೆ ನೆರವೇರಬೇಕಿತ್ತು. ಆದರೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಹೋಟೆಲ್‌ನಲ್ಲಿಯೇ ವಿಶ್ರಾಂತಿ ಪಡೆದರು.

ಅಮಿತ್ ಶಾ ಅವರ ಅನುಪಸ್ಥಿತಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಮಿತ್ ಶಾ ಗೈರಾಗಿರುವ ಕುರಿತು ಮಾಹಿತಿ ನೀಡಿದ ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಅಮಿತ ಶಾ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಅಮಿತ್ ಶಾ ಅವರು ಸದ್ಯ ಡೆನಿಸನ್ಸ್ ಹೋಟೆಲ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಬಳಿಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ನೇರವಾಗಿ ಗುಜರಾತಿಗೆ ಪ್ರಯಾಣಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನಾರೋಗ್ಯದ ಹಿನ್ನೆಲೆ ಕೆಎಲ್‌ಇ ಆಸ್ಪತ್ರೆ ಉದ್ಘಾಟನೆಗೆ ಅಮಿತ ಶಾ ಗೈರುಅವರಾದಿ ಗ್ರಾಪಂ ಕಚೇರಿಯಲ್ಲಿ ತಂದೆ-ಮಗಳ ಹತ್ಯೆ: ಮೂವರು ಆರೋಪಿಗಳ ಬಂಧನಮಮತಾ ಬೆಂಬಲ ಘೋಷಿಸಿದ ಕೆಲವೇ ಗಂಟೆಗಳಲ್ಲಿ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನಮೋದಿ ಜನ್ಮದಿನವನ್ನು ‘ನಿರುದ್ಯೋಗ ದಿನ’ವಾಗಿ ಆಚರಿಸಿ ಕಾಂಗ್ರೆಸ್ ಪ್ರತಿಭಟನೆಐಫೋನ್ 18 ಪ್ರೊ ಮಾರಾಟ ಆರಂಭ; ಆ್ಯಪಲ್ ಮಳಿಗೆಗಳ ಮುಂದೆ ಗ್ರಾಹಕರ ಸಾಲುನಿಥಾರಿ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಸುರೇಂದ್ರ ಕೋಲಿ ಶವವಾಗಿ ಪತ್ತೆ‘ಅಂಬಾರಿ’ಯಲ್ಲಿ ಸಿಎಂ, ಸಚಿವರ ಮೆರವಣಿಗೆಡೇಟಾ ಸೆಂಟರ್ ಕ್ಷೇತ್ರಕ್ಕೆ ₹1,300 ಕೋಟಿ ಪ್ರೋತ್ಸಾಹತೃಣಮೂಲ ಚಿಹ್ನೆ ಸ್ಥಗಿತಕ್ಕೆ ಆಕ್ರೋಶ: ‘ತಲೆ ಬಾಗಲ್ಲ, ಯಾರಿಗೂ ಶರಣಾಗಲ್ಲ’ - ಮಮತಾತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ; ಸಚಿವ ಸಂಪುಟದ ಐತಿಹಾಸಿಕ ನಿರ್ಧಾರ