LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆನಲೈನ್ ನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಇಂಜಿನೀಯರಿಂಗ ವಿದ್ಯಾರ್ಥಿ

ಹುಬ್ಬಳ್ಳಿ: ಆನಲೈನ್ ಗೇಮ್‌ ನಲ್ಲಿ ಹಣ ಕಳೆದುಕೊಂಡಿದ್ದ ವಿಜಯಪುರ ಜಿಲ್ಲೆ ಮೂಲದ ಇಂಜನಿಯರಿಂಗ ವಿದ್ಯಾರ್ಥಿಯೊಬ್ಬ ಬುಧವಾರ ತಡರಾತ್ರಿ ತಾನು ವಾಸಿಸುತ್ತಿದ್ದ ಇಲ್ಲಿನ ಶಿರಡಿ ನಗರದ ಬಿಸಿಎಂ ಹಾಸ್ಟೆಲ್‌ನ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದಾನೆ.



ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ರಾಕೇಶ ಶ್ರೀಶೈಲ ಜಂಬಲದಿನ್ನಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.



ಇಲ್ಲಿನ ವಿದ್ಯಾನಗರ ಬಿವಿಬಿ ಇಂಜನಿಯರಿಂಗ್ ಕಾಲೇಜಿನಲ್ಲಿ ಬಿಇ  "ಇ ಆ್ಯಂಡ್ ಸಿ" ವಿಭಾಗದಲ್ಲಿ 6ನೇ ಸೆಮಿಸ್ಟರ್ ಓದುತ್ತಿದ್ದ ಈತನು ಆನಲೈನ್‌ ಗೇಮ್‌ ವ್ಯಾಮೋಹಕ್ಕೊಳಗಾಗಿದ್ದ.‌ ಇದರಲ್ಲಿ ಹಣ ಕೂಡ ಕಳೆದುಕೊಂಡಿದ್ದ. ಇದರಿಂದ ಮನನೊಂದು ಕೊಠಡಿಯಲ್ಲಿನ ಫ್ಯಾನ್‌ ಗೆ ನೇಣು ಹಾಕಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.



ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ ಎನ್.  ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಯುವಕನ ಪಾಲಕರು ಹಾಸ್ಟೆಲ್‌ಗೆ ಆಗಮಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ