LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ಮೃಗಾಲಯದಲ್ಲಿ ಜಿಂಕೆಗಳ ಸಾವಿನ ತನಿಖೆಗೆ ಆದೇಶ

ಬೆಳಗಾವಿ : ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.



ಪ್ರಾಥಮಿಕ ವರದಿಗಳ ರೀತ್ಯ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.



ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.



ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST