LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೇವು ತರಲು ತೆರಳಿದ್ದ ವೃದ್ಧೆಯ ಮೇಲೆ ಅತ್ಯಾಚಾರ, ಬರ್ಬರ ಹತ್ಯೆ

ಕೋಲಾರ: ಹಸುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದ 70 ವರ್ಷದ ವೃದ್ಧೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಮೃತರನ್ನು ಚಾಕರಸನಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದ್ದು, ಅವರು ಎಂದಿನಂತೆ ಹಸುಗಳಿಗೆ ಹಸಿರು ಮೇವು ತರಲು ಸಮೀಪದ ತೋಟಕ್ಕೆ ತೆರಳಿದ್ದರು. ಈ ವೇಳೆ ಒಂಟಿಯಾಗಿದ್ದ ಅವರನ್ನು ಗುರಿಯಾಗಿಸಿಕೊಂಡ ದುಷ್ಕರ್ಮಿಗಳು ಮೊದಲು ಅತ್ಯಾಚಾರ ಎಸಗಿ, ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ವೃದ್ಧೆ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಕುಟುಂಬದವರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಹೊಲದ ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ಘಟನೆ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ವೇಮಗಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡವನ್ನು ಸ್ಥಳಕ್ಕೆ ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅತ್ಯಾಚಾರ ಮತ್ತು ಕೊಲೆ ಎಸಗಿದ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ನಂತರ ಘಟನೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
40 ದಿನದಲ್ಲೇ ತೀರ್ಪು; ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ಕೊಂದ ರಾಕ್ಷಸನಿಗೆ ಗಲ್ಲು ಶಿಕ್ಷೆಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಗೆ 16,925 ಹುದ್ದೆಗಳ ಮುಂದುವರಿಕೆಗೆ ಸರ್ಕಾರದ ಅನುಮೋದನೆಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ಪಕ್ಷದ ನಾಯಕರು ಕರೆದಾಗ ದಿಲ್ಲಿಗೆ ಹೋಗುತ್ತೇನೆ: ಡಿ.ಕೆ.ಶಿವಕುಮಾರಆಸ್ಟ್ರೇಲಿಯಾದಲ್ಲಿ ಯುವ ಕ್ರಿಕೆಟಿಗರೊಂದಿಗೆ ಮೋದಿ ಸಂವಾದಕೋರ್ಟ ಹಾಲ್‌ನಲ್ಲೇ ಕಾಗದ ಎಸೆದು ಸುಪ್ರೀಂ ಕೋರ್ಟ ಮುಖ್ಯ ನ್ಯಾಯಮೂರ್ತಿಗೆ ನಿಂದನೆದೇಶದಲ್ಲಿ ಪ್ರಶ್ನೆಗಳು ಉದ್ಭವಿಸಿದಾಗ ಪ್ರಧಾನಿ ಮೋದಿ ವಿದೇಶಕ್ಕೆ ಹೋಗುತ್ತಾರೆ: ಪ್ರಿಯಾಂಕ್ ಖರ್ಗೆಬಳ್ಳಾರಿಯಲ್ಲಿ ಎನ್‌ಐಎ ದಾಳಿ; ಉಗ್ರ ಚಟುವಟಿಕೆಗಳ ಸಂಚುಮೇವು ತರಲು ತೆರಳಿದ್ದ ವೃದ್ಧೆಯ ಮೇಲೆ ಅತ್ಯಾಚಾರ, ಬರ್ಬರ ಹತ್ಯೆಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯ ಬರ್ಬರ ಹತ್ಯೆವಾಯುದಾಳಿಗೆ ಪ್ರತಿಯಾಗಿ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ