LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಂತೋಷ ಪದ್ಮಣ್ಣವರ ಕೊಲೆ ಸಂಬಂಧ ಮತ್ತೊಬ್ಬನ ಬಂಧನ: ನಾಲ್ಕೂ ಜನ ಪೊಲೀಸ ಕಸ್ಟಡಿಗೆ

ಬೆಳಗಾವಿ, ೨೨: ಆಂಜನೇಯ ನಗರದ ಬಡ್ಡಿ ವ್ಯಾಪಾರಸ್ಥ, ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬನನ್ನು ಬಂಧಿಸಲಾಗಿದ್ದು ಪತ್ನಿ ಉಮಾ ಪದ್ಮಣ್ಣವರ ಸೇರಿದಂತೆ ನಾಲ್ವರು ಆರೋಪಿಗಳಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬೆಳಗಾವಿ ಎರಡನೇ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಪಂಕಜಾ ಕೊನ್ನೂರ ಅವರು ಈ ಆದೇಶ ಹೊರಡಿಸಿದರು.



ಕೊಲೆಯಾದ ಸಂತೋಷ ಪತ್ನಿ ಉಮಾ ಪದ್ಮಣ್ಣವರ, ಸ್ನೇಹಿತರಾದ ಶೋಭಿತ ಗೌಡ, ಪವನ ರಾಮನಕುಟ್ಟಿ ಅವರಿಗೆ ಅ.16ರಂದು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು‌.



ಈಗ ಇನ್ನೋರ್ವ ಆರೋಪಿ ಮಂಜುನಾಥ ತೇರ್ಕಲ್ ಎಂಬವನನ್ನು ದಿ.21, ಸೋಮವಾರ ರಾತ್ರಿ ಬಂಧಿಸಿದ್ದು ಎಲ್ಲ ಆರೋಪಿಗಳನ್ನು ಹೆಚ್ಚುವರಿ ತನಿಖೆಗಾಗಿ ಮಾಳಮಾರುತಿ ಪೊಲೀಸರು ಅ.22 ರಿಂದ ಅ.25ರ ವರೆಗೆ ಪೊಲೀಸ್ ಕಸ್ಟಡಿಗೆ ವಹಿಸುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿದಾಗ ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಅವರನ್ನೆಲ್ಲ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.



ಮಂಜುನಾಥ ತೇರ್ಕಲ್ ಎಂಬವ ಸಂತೋಷ ಪದ್ಮಣ್ಣವರ ಕೊಲೆ ಮಾಡಲು ಮಾತ್ರೆ ಮತ್ತು ಇಂಜೆಕ್ಷನ್‌ ತಂದು ಉಮಾಗೆ ನೀಡಿದ್ದ ಎನ್ನಲಾಗಿದೆ. ಕೊಲೆಯಾದಾಗಿನಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಮಂಜುನಾಥನನ್ನು ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಮಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಮಾಳಮಾರುತಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು ವಿಚಾರಣೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು