LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ರೂ. ವಂಚನೆ ಪ್ರಕರಣ!

ಬೆಳಗಾವಿ, 15: ನಗರದಲ್ಲಿ ಮತ್ತೊಂದು ಬಹುಕೋಟಿ ಹೂಡಿಕೆ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಅಪೆಕ್ಸ್ ಬಿಜ್ ಕಾರ್ಪ್ ಎಲ್‌ಎಲ್‌ಪಿ ಸಂಸ್ಥೆ ವಿರುದ್ಧ ₹160 ಕೋಟಿ ವಂಚನೆ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 13ರಂದು ಅಶೋಕ ಬಿಸಗುಪ್ಪಿ ಎಂಬುವರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾವಿರಾರು ಜನರಿಂದ ಹಣ ಹೂಡಿಕೆ ಮಾಡಿಸಿಕೊಂಡ ಆರೋಪಿಗಳು ಮಾಸಿಕ 4% ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಹಣ ಸಂಗ್ರಹಿಸಿದ್ದರು. ಹೂಡಿಕೆದಾರರಿಗೆ ಹ್ಯಾಂಡ್ ಲೋನ್ ಒಪ್ಪಂದ ಹಾಗೂ ಚೆಕ್ ನೀಡಿದ್ದರೂ, ಬಳಿಕ ಹಣ ಮರುಪಾವತಿಸದೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದಲ್ಲಿ ಕಾಶಿನಾಥ ವಾಗ್ಮರೆ, ಅವರ ಪತ್ನಿ, ಗಣೇಶ ಬಂಡಾರಿ, ಅವರ ಪತ್ನಿ ಸೇರಿದಂತೆ ಹಲವರು ಭಾಗಿಯಾಗಿರುವ ಆರೋಪವಿದೆ. ವಂಚನೆಯ ಮೊತ್ತ ₹50 ಕೋಟಿಗೂ ಅಧಿಕ ಇರುವುದರಿಂದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ರೂ. ವಂಚನೆ ಪ್ರಕರಣ!ಬೆಳಗಾವಿಯಲ್ಲಿ ಗುಂಡಿನ ದಾಳಿ: ಆರೋಪಿಗಳ ಬಂಧನಕ್ಕೆ ಎರಡು ವಿಶೇಷ ತಂಡ ರಚನೆಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಉಮಾ ಶಂಕರಿಸೋನಮ್ ವಾಂಗಚುಕ್ ಆರೋಗ್ಯ ಗಂಭೀರ; ಬಲವಂತವಾಗಿ ಆಹಾರ ನೀಡುವಂತೆ ದೆಹಲಿ ಹೈಕೋರ್ಟನಲ್ಲಿ ಅರ್ಜಿಇ.ಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದ ಮದನ್ ಮಿತ್ರಾಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿ