LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

11 ಸಾವಿರ ರೂ.ವರೆಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.



8 ರಿಂದ 10 ನೇ ತರಗತಿವರೆಗೆ ಓದುತ್ತಿರುವ ಹೆಣ್ಣು ಮಕ್ಕಳಿಗೆ ಮಾತ್ರ 2000 ರೂ., ಪಿಯುಸಿ, ಐಟಿಐ, ಡಿಪ್ಲೋಮಾ ಓದುತ್ತಿರುವ ಹೆಣ್ಣು ಮಕ್ಕಳಿಗೆ 3000 ರೂ. ಮತ್ತು ಗಂಡು ಮಕ್ಕಳಿಗೆ 2500 ರೂ., ಪದವಿ ಅಂದರೆ ಬಿ.ಎ, ಬಿ.ಎಸ್.ಸಿ., ಬಿಕಾಂ ಹಾಗೂ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಹೆಣ್ಣು ಮಕ್ಕಳಿಗೆ 5500 ರೂ. ಮತ್ತು ಗಂಡು ಮಕ್ಕಳಿಗೆ 5000 ರೂ., ವೃತ್ತಿಪರ ಕೋರ್ಸ್‌ಗಳಾದ ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್, ಬಿ ಫಾರ್ಮ್, ನರ್ಸಿಗ್ ಓದುತ್ತಿರುವ ಗಂಡು ಮಕ್ಕಳಿಗೆ 7500 ರೂ. ಮತ್ತು ಹೆಣ್ಣು ಮಕ್ಕಳಿಗೆ 8000 ರೂ., ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‌ಗಳನ್ನು ಓದುವ ಗಂಡು ಮಕ್ಕಳಿಗೆ 10,000 ರೂ. ಮತ್ತು ಹೆಣ್ಣು ಮಕ್ಕಳಿಗೆ 11,000 ರೂ. ಶಿಷ್ಯವೇತನ ನೀಡಲಾಗುವುದು.



ಶಿಷ್ಯ ವೇತನ ಅರ್ಜಿ ಸಲ್ಲಿಸಲಿಚ್ಚಿಸುವ ಜಿಲ್ಲೆಯ ಎಲ್ಲಾ ಮೀನುಗಾರರು FRUITS ID ಸೃಜಿಸಲು ತಮ್ಮ ಆಧಾರ್‌ ಕಾರ್ಡ್‌ ಪ್ರತಿ, ಮೀನುಗಾರರ ಸಹಕಾರ ಸಂಘದ ಸದಸ್ಯತ್ವ ಪತ್ರ, ಬ್ಯಾಂಕ್ ಖಾತೆ ವಿವರ, ಮೊಬೈಲ್ ದೂರವಾಣಿ ಸಂಖ್ಯೆ ಹಾಗೂ ಮಕ್ಕಳ ಶಾಲಾ ವಿದ್ಯಾಭ್ಯಾಸದ ಐಡಿ ಕಾರ್ಡ್ ಪ್ರತಿಯೊಂದಿಗೆ ಸಂಬಂಧಿಸಿದ ತಾಲೂಕು ಮೀನುಗಾರಿಕಾ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ ನವೆಂಬರ್ 30 ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ