LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಮತದಾರರ ಪಟ್ಟಿ ಅಕ್ರಮ : ತನಿಖೆಗೆ 7 ಜನ ಐಎಎಸ್ ಅಧಿಕಾರಿಗಳ ನೇಮಕ

ಹೊಸದಿಲ್ಲಿ : ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿಗಳೂ ಭಾಗಿಯಾಗಿರುವುದು ಕೇವಲ ಕೆಳಹಂತದ ಅಧಿಕಾರಿಗಳು ಭಾಗಿಯಾಗಿದ್ದರು ಎನ್ನಲಾಗುತ್ತಿತ್ತು.



ಆದರೆ ಇಬ್ಬರು ಐಎಎಸ್‌ ಅಧಿಕಾರಿಗಳಾದ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ಭಾಗಿಯಾಗಿರುವುದು ದೃಢಪಟ್ಟಿದೆ.



ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿದ್ದು, ವೋಟರ್ ಐಡಿ ಅಕ್ರಮದ ಬಗ್ಗೆ ತನಿಖೆಗಾಗಿ ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಿಸಿದೆ.



ಮತದಾರ ಪಟ್ಟಿಯಿಂದ ತೆಗೆದು ಹಾಕಿರುವುದು, ಸೇರ್ಪಡೆ, ತಿದ್ದುಪಡಿ ಬಗ್ಗೆ ಪೂರ್ಣಪರಿಶೀಲನೆ ಎಂದು ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಕ ಮಾಡಿ ಕೇಂದ್ರ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಿದೆ. ಅದರಲ್ಲೂ ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ವಲಯದಲ್ಲಿ ವಿಶೇಷವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದೆ.



ಖಾಸಗಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಿಂದ ಮತದಾರರ ಹೆಸರು ಡಿಲೀಟ್ ಆದವರ ಬಗ್ಗೆ ಕೂಲಂಕಷವಾಗಿ ಪರಿಶೀಲನೆಗೆ ಆದೇಶಿಸಿದ್ದು, ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ, ಹಾಗೂ ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಕೂಡಾ ಅಮಾನತು ಮಾಡಿದೆ. ಅಲ್ಲದೇ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಕೇಂದ್ರ ಚುನಾವಣಾ ಆಯೋಗ ಆದೇಶ ಮಾಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ