LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಮುರುಘಾಮಠ ಸ್ವಾಮಿಗಳ ಬಂಧನ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೆ ಅಜ್ಞಾತ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದಾರೆ ಎನ್ನಲಾಗಿದೆ.



ಮಠದ ಹಾಸ್ಟೇಲಿನ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೊಕ್ಸೊ ಪ್ರಕರಣ ದಾಖಲಾದ ಆರು ದಿನಗಳ ಬಳಿಕ ಇದೀಗ ಚಿತ್ರದುರ್ಗ ಪೊಲೀಸರು ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ್ದಾರೆ. ಆಗಸ್ಟ 26ರಂದು ಮೈಸೂರಿನ ನಜರಾಬಾದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥರು ದೂರು ದಾಖಲಿಸಿದ್ದರು.



ಗುರುವಾರ ಎರಡನೇ ಆರೋಪಿಯಾದ ಹಾಸ್ಟೇಲ್ ವಾರ್ಡನ್ ರಶ್ಮಿ ಅವರ ವಿಚಾರಣೆ ನಡೆದ ಬಳಿಕ ಶ್ರೀಗಳ ಬಂಧನ ಮಾಡಲಾಗಿದೆ.



'ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗಿದೆ. ಕಾರ್ಯವಿಧಾನದ ಪ್ರಕಾರ ವೈದ್ಯಕೀಯ ಪರೀಕ್ಷೆ ಮತ್ತು ತನಿಖೆಯನ್ನು ಮಾಡಲಾಗುತ್ತದೆ. ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಎಡಿಜಿಪಿ ಅಲೋಕ ಕುಮಾರ ಅವರು ಮಾಹಿತಿ ನೀಡಿದ್ದಾರೆ.



ಶ್ರೀಗಳ ಬಂಧನ ಹಿನ್ನಲೆಯಲ್ಲಿ ಎಲ್ಲ ಕಡೆ ಬಿಗಿ ಬಂದೋಬಸ್ತ‌ ಮಾಡಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ