LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಏಷ್ಯನ್‌ ಕ್ರೀಡಾಕೂಟ: ಚಿನ್ನದ ಪದಕ ವಿಜೇತರಿಗೆ ₹1 ಕೋಟಿ ಬಹುಮಾನ

ಬೆಂಗಳೂರು, ಅ. 6 (ಸಮದರ್ಶಿ ಸುದ್ದಿ): ಏಷ್ಯನ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರವನ್ನು ರಾಜ್ಯ ಸರ್ಕಾರ ₹35 ಲಕ್ಷದಿಂದ ₹1 ಕೋಟಿಗೆ ಹೆಚ್ಚಿಸಿದೆ. ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನೀಡಲು ನಿರ್ಧರಿಸಲಾಗಿದೆ.

ಈವರೆಗೆ ಚಿನ್ನದ ಪದಕಕ್ಕೆ ₹35 ಲಕ್ಷ, ಬೆಳ್ಳಿಗೆ ₹25 ಲಕ್ಷ ಹಾಗೂ ಕಂಚಿಗೆ ₹15 ಲಕ್ಷ ನಗದು ಪುರಸ್ಕಾರ ನೀಡಲಾಗುತ್ತಿತ್ತು. ಏಷ್ಯನ್‌ ಕ್ರೀಡಾಕೂಟ–2026ರಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳನ್ನು ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು ಘೋಷಿಸಿದರು.

‘ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹ, ಉದ್ಯೋಗ ಭದ್ರತೆ ಹಾಗೂ ಅಂತಾರಾಷ್ಟ್ರೀಯ ಸ್ಪರ್ಧೆಗಳಿಗೆ ಅಗತ್ಯ ನೆರವು ಕಲ್ಪಿಸಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಈ ಬಾರಿ ಎಂಟು ಪದಕ ವಿಜೇತರಿಗೆ ನಗದು ಪುರಸ್ಕಾರ ಸಿಗಲಿದ್ದು, ಹೆಚ್ಚುವರಿಯಾಗಿ ತಲಾ ₹5 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು’ ಎಂದು ತಿಳಿಸಿದರು.

20 ಕ್ರೀಡಾಪಟುಗಳಿಗೆ ತಲಾ ₹5 ಲಕ್ಷ

ಏಷ್ಯನ್‌ ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ.

ಗ್ರೂಪ್‌-ಬಿ ಹುದ್ದೆಗೆ ನೇರ ನೇಮಕ

ಏಷ್ಯನ್‌ ಹಾಗೂ ಕಾಮನ್‌ವೆಲ್ತ್‌ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಕ್ರೀಡಾಪಟುಗಳನ್ನು ಗ್ರೂಪ್‌-ಬಿ ಹುದ್ದೆಗಳ ನೇರ ನೇಮಕಾತಿಗೆ ಪರಿಗಣಿಸಲಾಗುವುದು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಮೂಲಕ ನೇಮಕಾತಿ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಕ್ರೀಡಾ ಸಚಿವರೂ ಆದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ‘ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತರುವ ಕ್ರೀಡಾಪಟುಗಳಿಗೆ ಸರ್ಕಾರಿ ಸೇವೆಯಲ್ಲಿ ಅವಕಾಶ ನೀಡಿ ಅವರ ಭವಿಷ್ಯಕ್ಕೆ ಭದ್ರತೆ ಕಲ್ಪಿಸುವುದು ಸರ್ಕಾರದ ಉದ್ದೇಶ’ ಎಂದರು.

ಸಾಧಕ ಕ್ರೀಡಾಪಟುಗಳಿಗೆ ಸರ್ಕಾರಿ ನೇಮಕಾತಿಯಲ್ಲಿ ಶೇ 2ರಷ್ಟು ಮೀಸಲಾತಿ ನೀಡಲಾಗಿದ್ದು, ರಾಜ್ಯ ಸರ್ಕಾರದ ಎಲ್ಲ ಹಂತದ ಹುದ್ದೆಗಳ ನೇರ ನೇಮಕಾತಿಗೂ ಇದು ಅನ್ವಯವಾಗಲಿದೆ ಎಂದು ತಿಳಿಸಿದರು.

‘ಗುರಿ: ಒಲಿಂಪಿಕ್ಸ್‌’

ಒಲಿಂಪಿಕ್ಸ್‌ನಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭಾಗವಹಿಸುವಿಕೆ ಮತ್ತು ಸಾಧನೆ ಹೆಚ್ಚಿಸಲು ಜಾರಿಗೊಳಿಸಿರುವ ‘ಗುರಿ: ಒಲಿಂಪಿಕ್ಸ್‌’ ಯೋಜನೆಯಡಿ 2026–27ನೇ ಸಾಲಿಗೆ ಎಂ.ಆರ್‌. ಪೂವಮ್ಮ, ಎಸ್‌.ಎಸ್‌. ಸ್ನೇಹಾ, ಶ್ರೇಯಾಂಕ ಪಾಟೀಲ ಮತ್ತು ಕೆ.ಎಸ್‌. ಶಿಲ್ಪಾ ಅವರನ್ನು ಸೇರ್ಪಡೆ ಮಾಡಲಾಗಿದೆ.

ಈ ಕ್ರೀಡಾಪಟುಗಳಿಗೆ ಒಲಿಂಪಿಕ್ಸ್‌ ಸಿದ್ಧತೆ, ತರಬೇತಿ ಹಾಗೂ ಇತರ ಅಗತ್ಯಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ತಲಾ ₹10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುವುದು ಎಂದು ಪರಮೇಶ್ವರ ತಿಳಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್‌ಐಆರ್‌ ವೆಬ್‌ಸೈಟ್‌ನಲ್ಲಿ ಗಂಭೀರ ದೋಷ: 10ಕ್ಕೂ ಹೆಚ್ಚು ನ್ಯಾಯಾಧೀಶರ ಆರೋಪಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಯತ್ನ; ರಾಹುಲ್‌, ಪ್ರಿಯಾಂಕಾ ಸೇರಿ ಇಂಡಿಯಾ ಸಂಸದರು ಪೊಲೀಸ್ ವಶಕ್ಕೆಡಿಐಜಿ ಸೋಮಶೇಖರ ವಿರುದ್ಧ ಲೈಂಗಿಕ ಶೋಷಣೆ ಆರೋಪಫ್ರಾನ್ಸಿಸ್ ಹಾಲ್ಜೆನ್‌ಗೆ ಭೌತಶಾಸ್ತ್ರ ನೊಬೆಲ್‌ಬದುಕಿರುವ 8 ಮುಸ್ಲಿಂ ಮತದಾರರನ್ನು ‘ಮೃತರು’ ಎಂದು ತೋರಿಸಿ ಹೆಸರು ಅಳಿಸಲು ಅರ್ಜಿ!ದೆಹಲಿ ಪ್ರತಿಭಟನೆಗೆ ಹೋಗದಂತೆ ಸಿಜೆಪಿ ಕಾರ್ಯಕರ್ತರಿಗೆ ಪೊಲೀಸ್‌ ಒತ್ತಡ: ದೀಪ್ಕೆಹೊರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ದಾಳಿ; 11 ಭಾರತೀಯರಿಗೆ ಗಾಯಏಷ್ಯನ್‌ ಕ್ರೀಡಾಕೂಟ: ಚಿನ್ನದ ಪದಕ ವಿಜೇತರಿಗೆ ₹1 ಕೋಟಿ ಬಹುಮಾನಎಸ್‌ಐಆರ್‌ ‘ಅನ್ಯಾಯ’ ಜನತಾ ನ್ಯಾಯಾಲಯದ ಮುಂದೆ: ಫ್ರೀಡಂ ಪಾರ್ಕ್‌ಗೆ ಸಿಜೆಪಿ ದಂಡುದೇಶದ್ರೋಹ ಎಸಗಿದವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ : ರಾಹುಲ್ ಗುಡುಗು